ಎಸ್.ಎಂ.ಕೃಷ್ಣ
From Wikipedia
ಸೋಮನಹಳ್ಳಿ ಮಲ್ಲಯ್ಯ ಕೃಷ್ಣ (ಜನನ:೧೯೩೨) ೧೯೯೯ ರಿಂದ ೨೦೦೪ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಪ್ರಸಕ್ತ ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲರು. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಕಾಂಗ್ರೆಸ್ ಪಕ್ಷದ ಸದಸ್ಯರು.
[ಬದಲಾಯಿಸಿ] ವಿದ್ಯಾಭ್ಯಾಸ
ಎಸ್ ಎಂ ಕೃಷ್ಣ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವೀಧರರಾದ ನಂತರ ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಓದಿದರು. ಇದರ ನಂತರ ಅಮೆರಿಕದ ಟೆಕ್ಸಸ್ ರಾಜ್ಯದಲ್ಲಿರುವ ಸದರ್ನ್ ಮೆಥಡಿಸ್ಟ್ ವಿಶ್ವವಿದ್ಯಾಲಯದಲ್ಲಿ ಓದಿ ನಂತರ ವಾಷಿಂಗ್ಟನ್ ನಲ್ಲಿರುವ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಪ್ರತಿಷ್ಠಿತ ಫುಲ್‍ಬ್ರೈಟ್ ವಿದ್ಯಾರ್ಥಿವೇತನವನ್ನು ಪಡೆದರು.
[ಬದಲಾಯಿಸಿ] ರಾಜಕೀಯ ಜೀವನ
ಭಾರತಕ್ಕೆ ಮರಳಿದ ನಂತರ ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಸ್ವಲ್ಪ ಕಾಲ ಅಂತಾರಾಷ್ಟ್ರೀಯ ನ್ಯಾಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು. ವಿಧಾನ ಸಭೆಗೆ ಮೊದಲ ಬಾರಿ ೧೯೬೨ ರಲ್ಲಿ ಚುನಾಯಿತರಾದರು. ೧೯೬೮ರಲ್ಲಿ ಲೋಕಸಭೆಗೆ ಚುನಾಯಿತರಾದರು. ೧೯೭೧ರಲ್ಲಿ ಅಲ್ಲಿಗೆ ಮರು ಚುನಾಯಿತರಾಗಿ ಮತ್ತೆ ೧೯೭೨ ರಲ್ಲಿ ಕರ್ನಾಟಕದ ವಿಧಾನ ಪರಿಷತ್ತಿಗೆ ಚುನಾಯಿತರಾದರು. ಇದೇ ಸಮಯದಲ್ಲಿ ವಾಣಿಜ್ಯ, ಉದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದರು. ೧೯೮೩ರಲ್ಲು ಉದ್ಯಮ ಖಾತೆ ಮತ್ತು ೧೯೮೪ ರಲ್ಲಿ ವಿತ್ತ ಖಾತೆಯ ಸಚಿವರಾದರು. ೧೯೮೯ ರಿಂದ ೧೯೯೨ರ ವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ನೇಮಿತರಾದರು. ೧೯೯೨ ರಿಂದ ೧೯೯೪ರ ವರೆಗೆ ಕರ್ನಾಟಕದ ಉಪ-ಮುಖ್ಯಮಂತ್ರಿಗಳಾದರು. ೧೯೯೬ರಲ್ಲಿ ರಾಜ್ಯಸಭೆಗೆ ನೇಮಕಗೊಂಡ ಕೃಷ್ಣ, ೧೯೯೯ ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ೧೯೯೯ರಿಂದಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿದ್ದರು.
ವಿದೇಶಗಳಲ್ಲಿ ಎರಡು ಬಾರಿ (ವಿಶ್ವಸಂಸ್ಥೆಯಲ್ಲಿ ಒಮ್ಮೆ, ಮತ್ತು ಕಾಮನ್ ವೆಲ್ತ್ ಒಕ್ಕೂಟದಲ್ಲಿ ಒಮ್ಮೆ) ಭಾರತವನ್ನು ಪ್ರತಿನಿಧಿಸಿದ್ದಾರೆ.
[ಬದಲಾಯಿಸಿ] ಕರ್ನಾಟಕದ ಮುಖ್ಯಮಂತ್ರಿಗಳು
ಹೆಚ್.ಡಿ.ಕುಮಾರಸ್ವಾಮಿ | ಧರಮ್ ಸಿಂಗ್ | ಎಸ್.ಎಂ.ಕೃಷ್ಣ | ಜೆ ಹೆಚ್ ಪಟೇಲ್ | ಹೆಚ್.ಡಿ.ದೇವೇಗೌಡ | ವೀರಪ್ಪ ಮೊಯ್ಲಿ | ಬಂಗಾರಪ್ಪ | ವೀರೇಂದ್ರ ಪಾಟೀಲ್ | ಎಸ್ ಆರ್ ಬೊಮ್ಮಾಯಿ | ರಾಮಕೃಷ್ಣ ಹೆಗಡೆ | ಆರ್ ಗುಂಡೂರಾವ್ | ಡಿ ದೇವರಾಜ ಅರಸ್ | ಎಸ್. ನಿಜಲಿಂಗಪ್ಪ | ಎಸ್ ಆರ್ ಕಂಠಿ | ಬಿ ಡಿ ಜತ್ತಿ | ಕಡಿದಾಳ್ ಮಂಜಪ್ಪ | ಕೆಂಗಲ್ ಹನುಮಂತಯ್ಯ | ಚೆಂಗಲರಾಯ ರೆಡ್ಡಿ