New Immissions/Updates:
boundless - educate - edutalab - empatico - es-ebooks - es16 - fr16 - fsfiles - hesperian - solidaria - wikipediaforschools
- wikipediaforschoolses - wikipediaforschoolsfr - wikipediaforschoolspt - worldmap -

See also: Liber Liber - Libro Parlato - Liber Musica  - Manuzio -  Liber Liber ISO Files - Alphabetical Order - Multivolume ZIP Complete Archive - PDF Files - OGG Music Files -

PROJECT GUTENBERG HTML: Volume I - Volume II - Volume III - Volume IV - Volume V - Volume VI - Volume VII - Volume VIII - Volume IX

Ascolta ""Volevo solo fare un audiolibro"" su Spreaker.
CLASSICISTRANIERI HOME PAGE - YOUTUBE CHANNEL
Privacy Policy Cookie Policy Terms and Conditions
ಗೋಪಾಲಕೃಷ್ಣ ಅಡಿಗ - Wikipedia

ಗೋಪಾಲಕೃಷ್ಣ ಅಡಿಗ

From Wikipedia

ಶ್ರೀ ಗೋಪಾಲಕೃಷ್ಣ ಅಡಿಗ
ಶ್ರೀ ಗೋಪಾಲಕೃಷ್ಣ ಅಡಿಗ

ಎಂ. ಗೋಪಾಲಕೃಷ್ಣ ಅಡಿಗ (೧೮ ಫೆಬ್ರುವರಿ ೧೯೧೮ - ೧೪ ನವಂಬರ್ ೧೯೯೨) - ಗೋಪಾಲಕೃಷ್ಣ ಅಡಿಗರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಗೇರಿ ಎಂಬ ಹಳ್ಳಿಯಲ್ಲಿ. ಪುರೋಹಿತ ಮನೆತನಕ್ಕೆ ಸೇರಿದ ಅಡಿಗರ ತಂದೆ ಸಂಸ್ಕೃತದಲ್ಲಿ ಶ್ಲೋಕಗಳನ್ನೂ, ಕನ್ನಡದಲ್ಲಿ ದೇಶಭಕ್ತಿಯ ಗೀತೆಗಳನ್ನೂ ರಚಿಸುತ್ತಿದ್ದರಂತೆ. ದಕ್ಷಿಣ ಕನ್ನಡ ಜಿಲ್ಲೆ ಯಕ್ಷಗಾನದ ತವರೂರು. ಚಿಕ್ಕಂದಿನಲ್ಲಿ ಅಡಿಗರು ಯಕ್ಷಗಾನ ಪ್ರಸಂಗಗಳು ಸುತ್ತಮುತ್ತ ಎಲ್ಲಿ ನಡೆದರೂ ತಪ್ಪಿಸಿಕೊಳ್ಳದೆ ನೋಡುತ್ತಿದ್ದರಂತೆ. ಆ ಹಾಡುಗಳ, ಮಟ್ಟುಗಳ ಕುಣಿತದ ಭಂಗಿಗಳು ಅವರ ಮನಸ್ಸಿನಲ್ಲಿ ಸದಾ ಅನುರಣನಗೊಳ್ಳುತ್ತಿತ್ತಂತೆ. "ಈ ವಾತಾವರಣದಲ್ಲಿ ನಾನು ನನ್ನ ಹದಿಮೂರನೇ ವಯಸ್ಸಿನಲ್ಲೇ ಪದ್ಯ ರಚನೆಗೆ ಕೈ ಹಾಕಿದೆನೆಂದು ತೋರುತ್ತದೆ. ಭಾಮಿನಿ ಷಟ್ಪದಿ, ವಾರ್ಧಕ ಷಟ್ಪದಿ, ಕಂದ ಪದ್ಯಗಳನ್ನು ರಚಿಸುತ್ತಿದ್ದೆ" ಎಂದು ಅವರೇ ಹೇಳಿದ್ದಾರೆ.


ಅಡಿಗರು ತಮ್ಮ ಪ್ರಾರಂಭದ ವಿದ್ಯಾಭ್ಯಾಸವನ್ನು ದಕ್ಷಿಣ ಕನ್ನಡದಲ್ಲಿ ಮುಗಿಸಿ, ನಂತರ ಮೈಸೂರಿಗೆ ಬಂದರು. ಬಿ.ಎ.(ಆನರ್ಸ್), ಎಂ.ಎ.(ಇಂಗ್ಲೀಷ್) ಪದವಿಗಳನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದ ಅವರು ಮೈಸೂರು ಶಾರದಾವಿಲಾಸ ಕಾಲೇಜು, ಸೆಂಟ್ ಫಿಲೋಮಿನಾ ಕಾಲೇಜು ಹಾಗೂ ಕುಮಟಾದ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದರು. ನಂತರ ಉಡುಪಿಯ ಪೂರ್ಣಪ್ರಜ್ಞ ಕಾಲೇಜು, ಸಾಗರದ ಲಾಲ್ ಬಹಾದ್ದೂರ್ ಶಾಸ್ತ್ರಿ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕೆಲಸ ಮಾಡಿದ ಅಡಿಗರು ನ್ಯಾಷನಲ್ ಬುಕ್ ಟ್ರಸ್ಟ್‌ನ ನಿರ್ದೇಶಕರಾಗಿ, ಸಿಮ್ಲಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‌ಡ್ ಸ್ಟಡೀಸ್‌ನ ರಿಸರ್ಚ್ ಫೆಲೋ ಆಗಿ ಕೆಲಸ ಮಾಡಿದರು. ಐವತ್ತೊಂದನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೌರವಿಸಲ್ಪಟ್ಟ ಅಡಿಗರು ರಾಜ್ಯ ಸಾಹಿತ್ಯ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಕೇರಳದ ಕುಮಾರನ್ ಆಶಾನ್ ಪ್ರಶಸ್ತಿ ಹಾಗೂ ಕಬೀರ್ ಸಂಮಾನ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. "ಸಾಕ್ಷಿ" ಪತ್ರಿಕೆಯ ಸಂಪಾದಕರಾಗಿ ಹೊಸ ಸಂವೇದನೆ ಹಾಗೂ ಹೊಸ ಅಭಿವ್ಯಕ್ತಿ ವಿಧಾನಗಳಿಗೆ ಮಾರ್ಗದರ್ಶಕರಾದರು.

ಪರಿವಿಡಿ

[ಬದಲಾಯಿಸಿ] ಸಾಹಿತ್ಯ

ಅಡಿಗರ ಮೊದಲ ಕವನ ಸಂಕಲನ ಭಾವತರಂಗ ಪ್ರಕಟವಾದದ್ದು ೧೯೪೬ರಲ್ಲಿ. ಅಲ್ಲಿಂದೀಚೆಗೆ ಅವರ ಹತ್ತು ಕವನ ಸಂಕಲನಗಳು ಪ್ರಕಟವಾಗಿವೆ. ಕಟ್ಟುವೆವು ನಾವು (೧೯೪೮), ನಡೆದು ಬಂದ ದಾರಿ (೧೯೫೨), ಚಂಡೆಮದ್ದಳೆ (೧೯೫೪), ಭೂಮಿಗೀತ (೧೯೫೯), ವರ್ಧಮಾನ (೧೯೭೨), ಇದನ್ನು ಬಯಸಿರಲಿಲ್ಲ (೧೯೭೫), ಮೂಲಕ ಮಹಾಶಯರು (೧೯೮೧), ಬತ್ತಲಾರದ ಗಂಗೆ (೧೯೮೩), ಚಿಂತಾಮಣಿಯಲ್ಲಿ ಕಂಡ ಮುಖ (೧೯೮೭) ಹಾಗೂ ಸುವರ್ಣ ಪುತ್ಥಳಿ (೧೯೯೦) ಪ್ರಕಟವಾಗಿವೆ. ೧೯೩೭ರಿಂದ ೧೯೭೬ರವರೆಗಿನ ಎಲ್ಲ ಸಂಕಲನಗಳನ್ನೂ ಒಳಗೊಂಡ ಅವರ ಸಮಗ್ರ ಕಾವ್ಯ (ಐ.ಬಿ.ಎಚ್. ಪ್ರಕಾಶನ, ೧೯೮೭) ಪ್ರಕಟವಾಗಿದೆ. ಅಡಿಗರು ಅನಾಥೆ, ಆಕಾಶದೀಪ ಎಂಬ ಎರಡು ಕಾದಂಬರಿಗಳನ್ನೂ ಬರೆದಿದ್ದಾರೆ. ಅನೇಕ ಅನುವಾದ ಕೃತಿಗಳೂ ಪ್ರಕಟವಾಗಿವೆ. ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ರಾಜಕೀಯ -ಹೀಗೆ ವಿವಿಧ ವಿಷಯಗಳ ಬಗ್ಗೆ ಅಡಿಗರು ಅನೇಕ ಲೇಖನಗಳನ್ನು ಬರೆದಿದ್ದಾರೆ. ಅವರ ಈ ಎಲ್ಲ ವೈಚಾರಿಕ ಲೇಖನಗಳೂ "ಸಮಗ್ರ ಗದ್ಯ" (ಸಾಕ್ಷಿ ಪ್ರಕಾಶನ, ೧೯೭೭) ಎಂಬ ಸಂಪುಟವೊಂದರಲ್ಲಿ ಪ್ರಕಟವಾಗಿದೆ. ೧೯೮೭ರಲ್ಲಿ ಮತ್ತೊಮ್ಮೆ ಅಡಿಗರ ಸಮಗ್ರ ಕಾವ್ಯ ಪ್ರಕಟವಾಯಿತು.ಐಬಿಎಚ್ ಪ್ರಕಾಶನ ಇದನ್ನು ಪ್ರಕಟಿಸಿತ್ತು. ೧೯೯೯ರಲ್ಲಿ ಅಡಿಗರ ಎಲ್ಲಾ ಕವನಗಳು ಇರುವ ಸಮಗ್ರ ಕವನಗಳ ಪೂರ್ಣ ಆವೃತ್ತಿಯನ್ನು ಸಪ್ನ ಬುಕ್ ಹೌಸ್ ಪ್ರಕಟಿಸಿತು. ಅಡಿಗರು ಕೆಲವು ಸಣ್ಣ ಕಥೆಗಳನ್ನೂ ಬರೆದಿದ್ದಾರೆ. ಒಮ್ಮೆ ಬೆಂಗಳೂರು ಕ್ಷೇತ್ರದಿಂದ ಲೋಕಸಭಾ ಚುನಾವಣೆಗೂ ಸ್ಫರ್ಧಿಸಿದ್ದರು.

[ಬದಲಾಯಿಸಿ] ಸಾಹಿತ್ಯ ಶೈಲಿ

ಅಡಿಗರ ಸಮಗ್ರ ಕಾವ್ಯವನ್ನು ಓದಿದಾಗ "ಆಧುನಿಕ ಮಹಾಕಾವ್ಯ"ವೊಂದನ್ನು ಓದಿದ ಅನುಭವವಾಗುತ್ತದೆ. ಇವರ ಕಾವ್ಯದ ನಾಯಕ ಇಪ್ಪತ್ತನೇ ಸತಮಾನದ ಸ್ವಾತಂತ್ರ್ಯೋತ್ತರ ಭಾರತದ ಆಧುನಿಕ ಸಂವೇದನೆಯ ವ್ಯಕ್ತಿ. ಸ್ವತಂತ್ರ ಭಾರತದ ರಾಜಕೀಯ, ಸಾಮಾಜಿಕ , ಸಾಂಸ್ಕೃತಿಕ ವಾಸ್ತವ ಇವರ ಕಾವ್ಯದಲ್ಲಿ ಆಕಾರ ಪಡೆದಂತೆ ಬಹುಶಃ ಕನ್ನಡದಲ್ಲಿ ಮತ್ತೆ ಯಾರ ಕಾವ್ಯದಲ್ಲೂ ಕಾಣಿಸಿಕೊಂಡಿಲ್ಲವೆನ್ನಬಹುದು. ಅಡಿಗರ ಕಾವ್ಯನಾಯಕನ ಕೆಲವು ಲಕ್ಷಣಗಳನ್ನು ಹೀಗೆ ಗುರ್ತಿಸಬಹುದು. ಸಾಂಪ್ರದಾಯಿಕವಾದ ಒಪ್ಪಿತ ಮೌಲ್ಯಗಳ ಬಗ್ಗೆ ಈತನಿಗೆ ಆರಾಧಕ ಮನೋಭಾವವಿಲ್ಲ. ಹಾಗೆಂದು ಅವುಗಳನ್ನು ಈತ ಸಾರಾಸಗಟಾಗಿ ತಿರಸ್ಕರಿಸುವಂಥವನೂ ಅಲ್ಲ. ಚಿಕಿತ್ಸಕ ಮನೋಭಾವದ ಈತನಿಗೆ ಸಮಕಾಲೀನ ಅಗತ್ಯಕ್ಕೆ ತಕ್ಕಂತೆ ಪರಂಪರೆಯನ್ನು ಸೂಕ್ತವಾಗಿ ಒಗ್ಗಿಸಿಕೊಳ್ಳುವುದರ ಬಗ್ಗೆ ಆಸಕ್ತಿ. ಅನೇಕ ನವ್ಯ ಕೃತಿಗಳಲ್ಲಿ ಕಾಣಿಸುವಂತೆ ಅಡಿಗರ ನಾಯಕ ಸೂಕ್ಷ್ಮ ಮನಸ್ಸಿನ ದುರ್ಬಲ ವ್ಯಕ್ತಿಯಲ್ಲ. ಈತನೊಬ್ಬ ಹೋರಾಟಗಾರ, ಎಲ್ಲದರ ಬಗ್ಗೆ ಬಂಡೇಳುವಂಥ ಬಂಡಾಯಗಾರ. ಎಲ್ಲ ಬಗೆಯ ಸರ್ವಾಧಿಕಾರೀ ಶಕ್ತಿಗಳ ವಿರುದ್ಧವೂ ಈತ ಪ್ರತಿಭಟಿಸುತ್ತಾನೆ. ಈ ಪ್ರತಿಭಟನೆ ಆತ್ಮ ವಿಶ್ಲೇಷಣೆಯ ಪ್ರಕ್ರಿಯೆಯೂ ಆಗುತ್ತದೆ. ಎಲ್ಲ ರೀತಿಯ ಆಕ್ರಮಣಗಳನ್ನು ಎದುರಿಸಿ ವ್ಯಕ್ತಿವಿಶಿಷ್ಟತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಈತನ ತುಡಿತ.

ಅಡಿಗರ ಆರಂಭದ ಕವಿತೆಗಳ ಮುಖ್ಯಗುಣ -ಭಾವತೀವ್ರತೆ. ಕೆಚ್ಚು, ಹೋರಾಟದ ಆಹ್ವಾನ ಅಡಿಗರ ಮನೋಭಾವಕ್ಕೆ ಸಹಜವಾದುದೆನ್ನಿಸಿದರೂ ಅದು ಪ್ರಕಟಗೊಂಡಿರುವ ಬಗೆ ಸಂಪೂರ್ಣವಾಗಿ ಭಾವಾವೇಶದಿಂದ ಬಂದದ್ದು. ಮುಂದೆ ಅಡಿಗರು ಗೆಲ್ಲಲು ಬಯಸಿದ್ದು, ವಿರೋಧಿಸಿದ್ದು, ಇಂಥ ರೀತಿಯನ್ನೇ. ಅಡಿಗರ ಆವೇಶ ಉತ್ಸಾಹ ಕ್ರಮೇಣ ವ್ಯಾವಹಾರಿಕ ಜಗತ್ತಿನ ಆಕ್ರಮಣದಿಂದಾಗಿ ಆಘಾತಕ್ಕೊಳಗಾದಂತೆ ಕಂಡು ಬರುತ್ತದೆ. ಬಾಲ್ಯದ ಮುಗ್ಧಲೋಕ, ಹದಿಹರಯದ ಹೊಂಗನಸಿನ ಜಗತ್ತು ಒಡೆದು ಛಿದ್ರವಾಗಿ ಕವಿಮನಸ್ಸು ವ್ಯಗ್ರವಾಗುತ್ತದೆ, ದಿಕ್ಕೆಡುತ್ತದೆ.

ಹತಾಶೆಯ ಸ್ಥಿತಿಯಲ್ಲಿ ಕವಿ ಮನಸ್ಸು ನಿಷ್ಠುರವಾಗಲು ಪ್ರಯತ್ನಿಸುತ್ತದೆ. ಇಂಥ ಸ್ಥಿತಿಯಲ್ಲಿ ಹರಯದ ಮನಸ್ಸನ್ನು ಸಹಜವಾಗಿ ಸೆಳೆಯಬಹುದಾಗಿದ್ದ ಹೆಣ್ಣಿನ ಸ್ನೇಹ ಸಹ ಕವಿಗೆ ಕಪಟವೆನ್ನಿಸುತ್ತದೆ. ದಿನನಿತ್ಯದ ನೋವು, ನಲಿವು, ಉತ್ಸಾಹ, ಚೆಲುವು ಇವೆಲ್ಲವೂ ಅವರ ಕಾವ್ಯದಲ್ಲಿ ಇಲ್ಲವೆನ್ನುವಷ್ಟು ಕಡಮೆ. ಕವಿ ಬದುಕಿನ ಸ್ನೇಹ, ಪ್ರೀತಿ, ಚೆಲುವು ಒಲವುಗಳಿಗೆ ಜಡರೇನೂ ಅಲ್ಲ. ಅವರ ಮನಸ್ಸು ಅದರಿಂದ ಮುದಗೊಳ್ಳುತ್ತದೆ. ಆದರೆ ಒಟ್ಟು ಕಾವ್ಯದ ಸಂದರ್ಭದಲ್ಲಿ ಅಂಥ ಕವಿತೆಗಳು ಅಮುಖ್ಯವಾಗುತ್ತವೆ. ಅಡಿಗರದು ಮುಖ್ಯವಾಗಿ ಧ್ಯಾನರೂಪೀ ಮನಸ್ಸು. ಅವರದೇ ಮಾತಿನಲ್ಲಿ ಹೇಳುವುದಾದರೆ -"ಹುತ್ತಗಟ್ಟಿದ ಚಿತ್ತ".

ಅಡಿಗರ ಕಾವ್ಯದುದ್ದಕ್ಕೂ ಕಂಡು ಬರುವ ಪ್ರಧಾನ ಅಂಶಗಳಲ್ಲೊಂದು ಭೂಮಿ ಆಕಾಶಗಳ ಸೆಳೆತಕ್ಕೆ ಸಿಕ್ಕ ಮಾನವನ ಸ್ಥಿತಿ. ಇದು ದೇಹ-ಮನಸ್ಸುಗಳ ಸಂಘರ್ಷವೂ ಹೌದು. ಆದರ್ಶ ವಾಸ್ತವಗಳ ನಡುವಿನ ತಿಕ್ಕಾಟವೂ ಹೌದು. ಅನೇಕ ಕವಿತೆಗಳಲ್ಲಿ ಮತ್ತೆ ಮತ್ತೆ ವ್ಯಕ್ತವಾಗುವ ಈ ಸಂಘರ್ಷ, ನೆಲ ಮುಗಿಲಿನ ಸೆಳೆತ ಸೇಂದ್ರಿಯವಾಗಿ ಅಭಿವ್ಯಕ್ತಿ ಪಡೆಯುವುದು "ಮೋಹನ ಮುರಲಿ" ಕವಿತೆಯಲ್ಲಿ. ಅಡಿಗರ ಕಾವ್ಯ ಬೆಳವಣಿಗೆಯಲ್ಲಿ ಇದು ಮುಖ್ಯ ಕವಿತೆ. ಲೌಕಿಕ ಸುಖದಲ್ಲಿ ತೃಪ್ತಿ ಪಡೆದಿದ್ದ ಮನಸ್ಸು ಅಲೌಕಿಕ ಸೆಳೆತಕ್ಕೆ ಒಳಗಾಗಿರುವ ಚಿತ್ರವನ್ನು ಈ ಕವಿತೆ ಸೊಗಸಾಗಿ ಚಿತ್ರಿಸುತ್ತದೆ.

[ಬದಲಾಯಿಸಿ] ದರ್ಶನ

ಅಡಿಗರ ಶೋಧನೆ -ಮರ್ತ್ಯದಲ್ಲಿಯೇ ಅಮರತೆಯ ಫಲ ಸಾಧಿಸುವ ಶೋಧನೆ -ಉದ್ದಕ್ಕೂ ಆತ್ಮಶೋಧನೆಯಾಗಿಯೇ ಬೆಳೆಯುತ್ತ ಹೋಗುತ್ತದೆ. ಈ ನೆಲದಲ್ಲಿಯೇ ಹುಟ್ಟಿದ ರಾಮಕೃಷ್ಣ, ಬುದ್ಧ, ಗಾಂಧಿ ದೊಡ್ಡವರಾದರು. ಮಹಾತ್ಮರಾದರು. ನಾನು ಮಾತ್ರ ಹಾಗೆಯೇ ಉಳಿದೆನೇಕೆ?

ಪ್ರತಿಯೊಬ್ಬ ವ್ಯಕ್ತಿಯೂ ತನಗೆ ತಾನೇ ವಿಕಾಸವಾಗಬೇಕು. ಈ ನೆಲದಲ್ಲಿಯೇ, ನೆಲದ ಪ್ರಜ್ಞೆ ಹೀರಿಯೇ ಬೆಳೆದು ದೊಡ್ಡವನಾಗಬೇಕು, ಉನ್ನತ ಚೇತನವಾಗಿ ರೂಪುಗೊಳ್ಳಬೇಕು -ಇದೇ ಅಡಿಗರ ದರ್ಶನ. ಅಡಿಗರ ದೃಷ್ಟಿಯಲ್ಲಿ ಸಮಾಜದ ಮೂಲ ಘಟಕ ವ್ಯಕ್ತಿ. ಯಾವ ಬಂಡಾಯವಾಗುವುದಿದ್ದರೂ ಅದು ವ್ಯಕ್ತಿಯಲ್ಲಿ. ಮಾನವನ ಹೆಚ್ಚಳ ಅವನ ವ್ಯಕ್ತಿತ್ವದ ವಿಕಾಸದಲ್ಲಿದೆ. ಪ್ರತಿಯೊಬ್ಬರ ವ್ಯಕ್ತಿತ್ವ ಬದುಕಲ್ಲಿ ಪ್ರತ್ಯಕ್ಷವಾದರೆ, ಬದುಕಿಗೆ ವಿವಿಧತೆ ಬರುತ್ತದೆ. ಸಮಾಜ ಈ ವ್ಯಕ್ತಿತ್ವದ ಪ್ರತ್ಯಕ್ಷತೆಗೆ ವಿರೋಧವಾಗಿ ಅಡಚಣೆಗಳನ್ನು ಒಡ್ಡುತ್ತಲೇ ಇರುತ್ತದೆ. ಅದಕ್ಕಾಗಿ ಸತತ ಬಂಡಾಯ ಮಾಡಬೇಕು. ಅಲ್ಲದೆ, ಅಡಿಗರ ಮಾಗಿದ ದೃಷ್ಟಿಯಲ್ಲಿ ಕ್ರಾಂತಿ ವೈಯಕ್ತಿಕವಾಗಿಯೇ ಆಗಬೇಕು. ವ್ಯಕ್ತಿತ್ವ ವಿಕಾಸದ ಹಾದಿಯಲ್ಲಿ ಸಾಮಾಜಿಕವಾದ ತನ್ನ ಮುಖವನ್ನೂ ಹುಡುಕಿಕೊಳ್ಳಬೇಕಾಗುತ್ತದೆ ಎಂಬ ದರ್ಶನ ಅವರ ಕಾವ್ಯ ಬೆಳವಣಿಗೆಯ ಮತ್ತೊಂದು ಮುಖ್ಯ ಹಂತವೆನ್ನಬಹುದು.ಇಡೀ ಮಾನವ ಜನಾಂಗದ ಇತಿಹಾಸವನ್ನೂ ಸಮಕಾಲೀನ ಸ್ಥಿತಿಯನ್ನೂ ಭಿತ್ತಿಯಾಗುಳ್ಳ ಅಡಿಗರ ಕಾವ್ಯ "ವ್ಯಕ್ತಿತ್ವ ವಿಕಾಸದ ಹೋರಾಟ"ವನ್ನು ಚಿತ್ರಿಸುವ ಮಹಾಕಾವ್ಯವಾಗಿದೆ.

ನವೋದಯ ಕಾವ್ಯದಲ್ಲಿ ಅನುಕರಣೆಯೇ ಹೆಚ್ಚಾಗುತ್ತಿದ್ದ ಕಾಲದಲ್ಲಿ, ಹೊಸ ಕಾಲದ ಹೊಸ ಅನುಭವಗಳಿಗೆ ಸ್ಪಂದಿಸುವ ಕಾವ್ಯವನ್ನು ರಚಿಸಿ ಹೊಸದೊಂದು ಮಾರ್ಗವನ್ನೇ ತೆರೆದ ಕವಿ ಅಡಿಗರು.

[ಬದಲಾಯಿಸಿ] ಉವಾಚ

ಅಡಿಗ ಉವಾಚ:

ಒಂದು ಕವನ ಒಂದು ಶತಮಾನದ ಮೇಲೆಯೂ ಸಂತೋಷಕೊಟ್ಟು ಜುಮ್ಮು ದಟ್ಟಿಸುವುದು ಸಾಧ್ಯವಾದರೆ, ಒಂದು ಶತಮಾನದ ಹಿಂದೆ ಇದ್ದ ಕಾವ್ಯಪ್ರಿಯನೊಬ್ಬ ಎದ್ದು ಬಂದು ಇದನ್ನು ಓದಿ ಮೆಚ್ಚುವುದು ಸಾಧ್ಯವಾದರೆ ಆಗ ಮಾತ್ರ ಕೃತಿ ಕೃತಾರ್ಥ. ದೇಶದ ಪರಿಸ್ಥಿತಿ ತುಂಬ ಕೆಡುತ್ತ ಬರುತ್ತಿದೆ -ಆರ್ಥಿಕವಾಗಿ, ನೈತಿಕವಾಗಿ ಯಾವ ಕಡೆ ಹೋಗುತ್ತದೆ, ಏನಾಗುತ್ತದೆ, ತಿಳಿಯುವುದಿಲ್ಲ. ಹುಡುಗನಲ್ಲಿ ಕಪಿ ಅಂಶವೂ ಇದೆ, ಆಂಜನೇಯನಂತೆ ಅದ್ಭುತವಾಗಿ ಬೆಳೆಯಬಲ್ಲ ಸಾಧ್ಯತೆಯೂ ಇದೆ -"ಹನುಮದ್ವಿಲಾಸ". ಕಾವ್ಯ ಸಂಪ್ರದಾಯಬದ್ಧವಾಗಬಾರದು, ಆಗ ಕಾವ್ಯದಲ್ಲಿ ಮುಗ್ಗಲು ವಾಸನೆ ಬರುತ್ತದೆ. ಪಂಪ ಕುಮಾರವ್ಯಾಸರನ್ನು ಓದಿ ಸಂತೋಷಪಡಲಾರದವನು ಆಧುನಿಕ ಕಾವ್ಯವನ್ನೋದಿ ನಿಜವಾಗಿಯೂ ಪುಲಕಿತನಾಗುತ್ತಾನೆ ಎಂದು ನಂಬುವುದು ಕಷ್ಟ. ಹೊಸತು ಹಳೆಯದರ ಜೊತೆಗೂ, ಹಳೆಯದು ಹೊಸದರ ಜೊತೆಗೂ ಹೊಂದಿಕೊಳ್ಳದೆ ಬದುಕು ಸುಸಂಸ್ಕೃತವಾಗುವುದಿಲ್ಲ, ಕಾವ್ಯವು ಶ್ರೇಷ್ಠವಾಗುವುದಿಲ್ಲ.

Static Wikipedia (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu

Static Wikipedia February 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu