New Immissions/Updates:
boundless - educate - edutalab - empatico - es-ebooks - es16 - fr16 - fsfiles - hesperian - solidaria - wikipediaforschools
- wikipediaforschoolses - wikipediaforschoolsfr - wikipediaforschoolspt - worldmap -

See also: Liber Liber - Libro Parlato - Liber Musica  - Manuzio -  Liber Liber ISO Files - Alphabetical Order - Multivolume ZIP Complete Archive - PDF Files - OGG Music Files -

PROJECT GUTENBERG HTML: Volume I - Volume II - Volume III - Volume IV - Volume V - Volume VI - Volume VII - Volume VIII - Volume IX

Ascolta ""Volevo solo fare un audiolibro"" su Spreaker.
CLASSICISTRANIERI HOME PAGE - YOUTUBE CHANNEL
Privacy Policy Cookie Policy Terms and Conditions
ಜಿ.ಪಿ.ರಾಜರತ್ನಂ - Wikipedia

ಜಿ.ಪಿ.ರಾಜರತ್ನಂ

From Wikipedia

ಶ್ರೀ ಜಿ ಪಿ ರಾಜರತ್ನಂ
ಶ್ರೀ ಜಿ ಪಿ ರಾಜರತ್ನಂ

"ಬಣ್ಣದ ತಗಡಿನ ತುತ್ತೂರಿ, ಕಾಸಿಗೆ ಕೊಂಡನು ಕಸ್ತೂರಿ" ಎಂಬ ಶಿಶು ಗೀತೆಯಿಂದ, ಎಂಡಕುಡುಕ ರತ್ನನ ಪದಗಳನ್ನಲ್ಲದೆ ನೂರಾರು ಕೃತಿಗಳನ್ನು ರಚಿಸಿ ಕನ್ನಡ ಕಾಯ್ದ, ಬೋಧಿಸಿದ `ಮೇಷ್ಟ್ರು' ಆಗಿ ಹೆಸರಾದವರು ಜಿ.ಪಿ.ರಾಜರತ್ನಂ ಅವರು.

[ಬದಲಾಯಿಸಿ] ಜೀವನ

ಡಿಸೆಂಬರ್ ೦೫, ೧೯೦೪ರಲ್ಲಿ ಹುಟ್ಟಿದ ಜಿ. ಪಿ. ರಾಜರತ್ನಂ ಅವರದ್ದು ಹೆಸರಾಂತ ಗುಂಡ್ಲು ಪಂಡಿತ ವಂಶ. ತಾಯಿ ಪ್ರೀತಿ ಇಲ್ಲದೆ ಬೆಳೆದ ರಾಜರತ್ನಂಗೆ ತಂದೆಯೇ ಎಲ್ಲವೂ ಆಗಿದ್ದರು. ಅಜ್ಜಿಯ ಅಕ್ಕರೆಯಲ್ಲೂ ರಾಜರತ್ನಂ ಬೆಳೆದರು. ತಂದೆ ಬಡ ಮೇಸ್ಟ್ರು. ಸ್ವಾತಂತ್ರ್ಯ ಪೂರ್ವದಲ್ಲೇ (೧೯೩೧ರಲ್ಲಿ) ರಾಜರತ್ನಂ ಕನ್ನಡ ಎಂ. ಎ. ಮುಗಿಸಿ ಶಿಶು ವಿಹಾರ ಹಾಗೂ ತಂದೆಯ ಶಾಲೆಯಲ್ಲಿ ಆರಂಭಿಕ ಮೇಸ್ಟ್ರು ಆದರು. ಇದರ ಅನುಭವದ ಫಲವೇ ಮಕ್ಕಳ ಕುರಿತು ಬರೆದ `ತುತ್ತೂರಿ' ಶಿಶು ಗೀತೆ ಸಂಕಲನ. ಕ್ರಮೇಣ ಆ ಕೆಲಸ ತೃಪ್ತವಾಗದೆ ಹೈದರಾಬಾದಿಗೂ ಕೆಲಸ ಹುಡುಕಿ ಹೋಗಿದ್ದುಂಟು. ಅಲ್ಲಿಂದ ನಿರಾಶರಾಗಿ ಬೆಂಗಳೂರಿಗೆ ಬಂದು ಜನಗಣತಿ ಕಛೇರಿಯಲ್ಲಿ ಕೆಲಸಕ್ಕೆ ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಮಾಸ್ತಿ ಅವರು ಸಾಹಿತ್ಯ ಸೇವೆ ಮುಂದುವರೆಸಲು ಉಪದೇಶಿಸಿದರು. ಅದರ ಫಲವೇ ಮುಂದೆ ರಾಜರತ್ನಂ ಅವರಿಂದ ಉತ್ತಮ ಸಾಹಿತ್ಯ ನಿರ್ಮಾಣಕ್ಕೆ ದಾರಿಯಾಯಿತು. ಬೌದ್ಧ ಸಾಹಿತ್ಯ ಇಂಥ ಉಪಯುಕ್ತ ಸಾಹಿತ್ಯದಲ್ಲೊಂದು ಮಿಂಚು. ರಾಜರತ್ನಂ ಅವರಿಗೆ ವೈವಾಹಿಕ ಜೀವನದಲ್ಲಿ ಸಾಕಷ್ಟು ನೋವುಂಟಾಯಿತು. ಪತ್ನಿ ಲಲಿತಮ್ಮ ಕಾಯಿಲೆ ಬಿದ್ದವರು ಉತ್ತಮವಾಗಲೇ ಇಲ್ಲ. ವಿಧಿವಶರಾದ ಲಲಿತಮ್ಮ ಅವರ ನೆನಪು ಹಸಿರಾಗಿದ್ದಾಗಲೇ ಸೀತಮ್ಮ ಅವರ ಬಾಳನಂದಾದೀಪವಾಗಿ ಬಂದರು. ಬದುಕು ಸ್ಥಿರವಾಯಿತು. ಕಷ್ಟ ಕಾರ್ಪಣ್ಯಗಳ ನಡುವೆ ೧೯೩೮ರಲ್ಲಿ ಕನ್ನಡ ಪಂಡಿತ ಹುದ್ದೆ ರಾಜರತ್ನಂ ಅವರನ್ನು ಹುಡುಕಿ ಬಂತು. ಮೈಸೂರು, ಬೆಂಗಳೂರು, ಶಿವಮೊಗ್ಗ, ತುಮಕೂರುಗಳಲ್ಲಿ ಅಧ್ಯಾಪಕರಾಗಿ, ಮೆಚ್ಚಿನ ಮೇಸ್ಟ್ರು ಆಗಿ ಖ್ಯಾತರಾದರು. ನೂರಾರು ವಿದ್ಯಾರ್ಥಿಗಳಿಗೆ ಸಾಹಿತ್ಯ ಸೃಷ್ಟಿಯಲ್ಲಿ ಪ್ರೇರಕ ಶಕ್ತಿಯಾದರು. ಪ್ರೊ| ಎ.ಆರ್.ಕೃಷ್ಣಶಾಸ್ತ್ರಿ ಸ್ಥಾಪಿಸಿದ್ದ ಸೆಂಟ್ರಲ್ ಕಾಲೇಜಿನ ಕರ್ಣಾಟಕ ಸಂಘದ ಸಕ್ರಿಯ ಚಟುವಟಿಕೆಗಳಲ್ಲಿ ಭಾಗವಹಿಸಿ ಅದಕ್ಕೊಂದು ಘನತೆ ತಂದರು. ೧೯೭೬ರಲ್ಲಿ ದ.ಕ.ಜಿಲ್ಲಾ ಸಾಹಿತ್ಯ ಸಮ್ಮೇಳನ ಹಾಗೂ ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಜಿ.ಪಿ.ರಾಜರತ್ನಂ ೧೯೬೯ರಲ್ಲೇ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು. ೧೯೭೭ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಪದವಿ ಲಭಿಸಿತು. ೧೯೭೮ರಲ್ಲಿ ದೆಹಲಿಯಲ್ಲಿ ಸುವರ್ಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ೧೯೭೯ರಲ್ಲಿ ಧರ್ಮಸ್ಥಳ ಸಾಹಿತ್ಯ ಸಮ್ಮೇಳನದಲ್ಲಿ ಮಕ್ಕಳ ಸಾಹಿತ್ಯ ಗೋಷ್ಠಿ ಅಧ್ಯಕ್ಷತೆ ವಹಿಸಿದ್ದರು.ರಾಜರತ್ನಂ ಅವರ ಸಾಹಿತ್ಯ ಸೇವೆಗೆ ಎರಡು ಮುಖ. ಒಂದು ಸಾಹಿತ್ಯ ಸೃಷ್ಟಿ, ಎರಡು ಸಾಹಿತ್ಯ ಪರಿಚಾರಿಕೆ.

[ಬದಲಾಯಿಸಿ] ಕೃತಿಗಳು

``ರತ್ನನ ಪದಗಳು" ರಾಜರತ್ನಂ ಅವರ ವಿಶಿಷ್ಟ ಕೊಡುಗೆ. ಇದರಲ್ಲಿ ಅವರ ಜೀವನ ದರ್ಶನವಿದೆ. ಕುಡುಕನೆಂಬ ಹೀಯಾಳಿಕೆಗೆ ಗುರಿಯಾದ ಬಡವನೊಬ್ಬನ ಕಾಣ್ಕೆ, ನೋವು, ನಲಿವು, ಒಲವು, ಗೆಲವು, ಸೋಲು ಎಲ್ಲಾ ಈ ಕಾವ್ಯದಲ್ಲಿ ಮೈದುಂಬಿವೆ. ಟಿ. ಪಿ.ಕೈಲಾಸಂ ಅವರ ಸಾಹಿತ್ಯ ಪ್ರಭಾವ, ಭಾಷೆ ಬಳಕೆ ರಾಜರತ್ನಂ ಅವರ ಮೇಲಾಗಿರುವುದು ಕಾಕತಾಳೀಯ ಇರಬಹುದು. ರಾಜರತ್ನಂ ಅವರ ಪ್ರಮುಖ ಕೃತಿಗಳು:

  • ತುತ್ತೂರಿ
  • ರತ್ನನ ಪದಗಳು
  • ಎಂಡಕುಡುಕ ರತ್ನ
  • ನಾಗನ ಪದಗಳು
  • ಬುದ್ಧನ ಜಾತಕಗಳು
  • ಧರ್ಮದಾನಿ ಬುದ್ಧ
  • ಭಗವಾನ್ ಮಹಾವೀರ
  • ಮಹಾವೀರನ ಮಾತುಕತೆ
  • ಕಡಲೆಪುರಿ
  • ಗುಲಗಂಜಿ
  • ಕಂದನ ಕಾವ್ಯ ಮಾಲೆ

ಗೌತಮಬುದ್ಧ ಪಠ್ಯವಾಗಿತ್ತು. ರಾಜರತ್ನಂ ತಮ್ಮನ್ನು ತಾವೇ ಸಾಹಿತ್ಯ ಪರಿಚಾರಕ ಎಂದು ಕರೆದುಕೊಳ್ಳುತ್ತಿದ್ದರು. ಇದರಿಂದ ಅವರ ಉದ್ದೇಶ ಸ್ಪಷ್ಟವಾಗಿತ್ತು- ಭಾಷಣ ಮೂಲಕ, ಕೃತಿ ಪ್ರಕಟಣೆ ಮೂಲಕ ಜನರ ಬಳಿಗೆ ಸಾಹಿತ್ಯ ಕೊಂಡೊಯ್ಯುವುದಾಗಿತ್ತು. ಹೀಗಾಗಿ ಜಿ. ಪಿ. ರಾಜರತ್ನಂ ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟ ಸಂವೇದನೆ ಉಂಟು ಮಾಡಿದವರು. ಇವರು ೧೯೭೯ಮಾರ್ಚ್ ತಿಂಗಳಲ್ಲಿ ನಿಧನರಾದರು.

Static Wikipedia (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu

Static Wikipedia February 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu