ಪರ್ವ(ಕಾದಂಬರಿ)
From Wikipedia
`ಪರ್ವ' ಎಸ್. ಎಲ್. ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲೇ ಭಾರೀ ಚರ್ಚೆಗೆ ಒಳಗಾದದ್ದು. ಮಹಾಭಾರತದ ಕಥೆಯನ್ನು ವೈಚಾರಿಕ ದೃಷ್ಟಿಕೋನದಿಂದ `ಪರ್ವ'ದಲ್ಲಿ ಹೇಳಲಾಗಿದೆ. ಮಹಾಭಾರತ ಕಾಲದ ಭಾರತೀಯ ಸಮಾಜದ ರೀತಿನೀತಿಗಳನ್ನೂ, ಆ ಕಾಲದ ಜೀವನ ಮೌಲ್ಯಗಳನ್ನು, ಮೃತ್ಯುವಿನ ರಹಸ್ಯಾತ್ಮಕತೆಯನ್ನು ಕಾದಂಬರಿಯಲ್ಲಿ ಅರ್ಥಪೂರ್ಣವಾಗಿ ಮೈಗೂಡಿಸಲಾಗಿದೆ. ಲೈಂಗಿಕತೆ ಮತ್ತು ಸಾವುಗಳ ನೆಲೆಯಲ್ಲಿ ದ್ರೌಪದಿ, ಕುಂತಿ, ಮಾದ್ರಿ, ಗಾಂಧಾರಿ ಪಾತ್ರಗಳನ್ನು ಮೂಡಿಸಿದ್ದಾರೆ.