ಬೆಳಗಾವಿ
From Wikipedia
ಬೆಳಗಾವಿ ಉತ್ತರ ಕರ್ನಾಟಕದಲ್ಲಿ ಇರುವ ನಗರ ಮತ್ತು ಜಿಲ್ಲೆ.
ಇಂದಾಲ್ (ಭಾರತೀಯ ಅಲ್ಯೂಮಿನಿಯಮ್ ಕಂಪೆನಿ) ಬೆಳಗಾವಿಯಲ್ಲಿದೆ. ಇದಲ್ಲದೆ ಭಾರತೀಯ ಸೇನಾ ಪಡೆಗಳಿಗೆ ಸಂಬಂಧಪಟ್ಟ ಕೆಲವು ತರಬೇತಿ ಶಿಬಿರಗಳು ಮತ್ತು ಭಾರತೀಯ ವಾಯುಸೇನೆಯ ಒಂದು ವಿಮಾನ ನಿಲ್ದಾಣ ಬೆಳಗಾವಿಯಲ್ಲಿವೆ.
ಪರಿವಿಡಿ |
[ಬದಲಾಯಿಸಿ] ಚರಿತ್ರೆ
ಬೆಳಗಾವಿಯ ಪುರಾತನ ಹೆಸರು ವೇಣುಗ್ರಾಮ. ಈ ಜಿಲ್ಲೆಯ ಅತಿ ಪ್ರಾಚೀನ ಸ್ಥಳ ಎಂದರೆ ಹಲಸಿ - ಉಪಲಬ್ಧವಾಗಿರುವ ತಾಮ್ರಶಾಸನಗಳ ಆಧಾರದ ಮೇಲೆ ಹಲಸಿ ಕೆಲವು ಕದಂಬ ವಂಶದ ಅರಸರ ರಾಜಧಾನಿಯಾಗಿದ್ದಿತೆಂದು ಊಹಿಸಲಾಗಿದೆ. ೬ ನೇ ಶತಮಾನದಿಂದ ಸುಮಾರು ಕ್ರಿ.ಶ. ೭೬೦ ರ ವರೆಗೆ ಈ ಸ್ಥಳ ಚಾಲುಕ್ಯ ಸಾಮ್ರಾಜ್ಯದ ಭಾಗವಾಗಿದ್ದು, ನಂತರ ರಾಷ್ಟ್ರಕೂಟರ ನಿಯಂತ್ರಣಕ್ಕೆ ಸಾಗಿತು. ರಾಷ್ಟ್ರಕೂಟರ ಶಕ್ತಿ ಕಡಿಮೆಯಾದ ನಂತರ ರತ್ತ ವಂಶದ (೮೭೫ - ೧೨೫೦)ಕೈಯಲ್ಲಿದ್ದ ವೇಣುಗ್ರಾಮ, ೧೨೧೦ ರ ನಂತರ ರಾಜಧಾನಿಯಾಯಿತು. ೧೨೫೦ ರ ನಂತರ ದೇವಗಿರಿಯ ಯಾದವರು ಈ ಪ್ರದೇಶವನ್ನು ಸ್ವಲ್ಪ ಕಾಲ ಆಳಿದರು. ೧೩೨೦ ರಲ್ಲಿ ದೆಹಲಿಯ ಸುಲ್ತಾನೇಟ್ ಗಳ ಕೈಯಲ್ಲಿ ಯಾದವರು ಸೋಲನುಭವಿಸಿದ ನಂತರ ಸ್ವಲ್ಪ ಕಾಲ ದೆಹಲಿಯ ಆಡಳಿತದಲ್ಲಿ ಬೆಳಗಾವಿ ಜಿಲ್ಲೆ ಇತ್ತು. ಆದರೆ ಕೆಲವೇ ವರ್ಷಗಳ ನಂತರ ವಿಜಯನಗರ ಸಾಮ್ರಾಜ್ಯ ಈ ಪ್ರದೇಶವನ್ನು ತನ್ನದಾಗಿಸಿಕೊಂಡಿತು. ಬೆಳಗಾವಿ ಜಿಲ್ಲೆಯ ಉತ್ತರದ ಭಾಗಗಳು ೧೩೪೭ ರಲ್ಲಿ ಬಹಮನಿ ಸುಲ್ತಾನರ ಕೈ ಸೇರಿದವು. ೧೪೭೩ ರಲ್ಲಿ ಬೆಳಗಾವಿ ಪಟ್ಟಣ ಮತ್ತು ಜಿಲ್ಲೆಯ ಉಳಿದ ಭಾಗಗಳನ್ನು ಸಹ ಬಹಮನಿ ಸುಲ್ತಾನರು ಗೆದ್ದರು. ಬಿಜಾಪುರದ ಸುಲ್ತಾನರನ್ನು ಔರಂಗಜೇಬ್ ೧೬೮೬ ರಲ್ಲಿ ಸೋಲಿಸಿದ ಮೇಲೆ ಸ್ವಲ್ಪ ಕಾಲ ಬೆಳಗಾವಿ ಮುಘಲ್ ಸಾಮ್ರಾಜ್ಯದ ಭಾಗವಾಯಿತು. ೧೭೭೬ ರಲ್ಲಿ ಹೈದರ್ ಅಲಿ ಈ ಪ್ರದೇಶವನು ಗೆದ್ದರೂ ಬ್ರಿಟಿಷರ ಸಹಾಯದಿಂದ ಮರಾಠಾ ಪೇಶ್ವೆಗಳು ಈ ಪ್ರದೇಶವನ್ನು ಗೆದ್ದರು. ೧೮೧೮ ರಲ್ಲಿ ಬ್ರಿಟಿಷರ ಆಡಳಿತಕ್ಕೆ ಸಾಗಿದ ಬೆಳಗಾವಿ ಧಾರವಾಡ ಜಿಲ್ಲೆಯ ಭಾಗವಾಗಿತ್ತು. ೧೮೩೬ ರಲ್ಲಿ ಈ ಜಿಲ್ಲೆಯನ್ನು ಎರಡು ಭಾಗವಾಗಿ ಮಾಡಿ ಉತ್ತರ ಭಾಗವನ್ನು ಬೆಳಗಾವಿ ಜಿಲ್ಲೆಯಾಗಿ ಮಾಡಲಾಯಿತು.
ಬೆಳಗಾವಿ ಜಿಲ್ಲೆಯಲ್ಲಿರುವ ಕಿತ್ತೂರು ಚಾರಿತ್ರಿಕವಾಗಿ ಪ್ರಸಿದ್ಧ. ಕಿತ್ತೂರು ರಾಣಿ ಚೆನ್ನಮ್ಮ ಚರಿತ್ರೆಯಲ್ಲಿ ಸಾಹಸ ಮತ್ತು ಧೈರ್ಯದ ಪ್ರತೀಕವಾಗಿದ್ದಾಳೆ. ಬ್ರಿಟಿಷ್ ಆಡಳಿತದ ವಿರುದ್ಧ ಹೋರಾಡಿದ ಬೆಳಗಾವಿಯ ಇನ್ನೊಬ್ಬ ಪ್ರಸಿದ್ಧ ವ್ಯಕ್ತಿಯೆಂದರೆ ಸಂಗೊಳ್ಳಿ ರಾಯಣ್ಣ.
[ಬದಲಾಯಿಸಿ] ತಾಲೂಕುಗಳು
- ಬೆಳಗಾವಿ
- ಗೋಕಾಕ
- ಬೈಲಹೊಂಗಲ
- ಸವದತ್ತಿ
- ರಾಮದುರ್ಗ
- ಅಥಣಿ
- ಚಿಕ್ಕೊಡಿ
- ರಾಯ್‍ಭಾಗ್
- ಖಾನಾಪುರ್
[ಬದಲಾಯಿಸಿ] ಆಕರ್ಷಣೆಗಳು
- ಗೋಕಾಕ್ ಜಲಪಾತ - ಘಟಪ್ರಭಾ ನದಿಯ ಜಲಪಾತ
- ಹಳೆಯ ಕಲ್ಲಿನ ಕೋಟೆ (೧೫೧೯ ರಲ್ಲಿ ಕಟ್ಟಿದ್ದೆಂದು ನಂಬಲಾಗಿದೆ)
- ಕಪಿಲೇಶ್ವರ ದೇವಸ್ಥಾನ
- ಸಾಂಭಾಜಿ ಉದ್ಯಾನ ಮತ್ತು ಶಿವಾಜಿ ಉದ್ಯಾನ
- ಹಿಡಕಲ್ ಜಲಾಶಯ
[ಬದಲಾಯಿಸಿ] ಭಾಷೆಗಳು
ಬೆಳಗಾವಿ ಜಿಲ್ಲೆಯಲ್ಲಿ ಮಾತನಾಡಲ್ಪಡುವ ಮುಖ್ಯ ಭಾಷೆಗಳು ಕನ್ನಡ, ಮತ್ತು ಮಹಾರಾಷ್ಟ್ರದ ಸಾಮೀಪ್ಯದಿಂದಾಗಿ ಮರಾಠಿ.
[ಬದಲಾಯಿಸಿ] ಇವನ್ನೂ ನೋಡಿ
[ಬದಲಾಯಿಸಿ] ಹೊರಗಿನ ಸಂಪರ್ಕಗಳು
ಬೆಳಗಾವಿ ಜಿಲ್ಲೆಯ ಅಧಿಕೃತ ಸರ್ಕಾರಿ ತಾಣ
ಬೆಳಗಾವಿ ಪ್ರವಾಸ
ಬೆಂಗಳೂರಿನಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆ
ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ್ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ರಾಯಚೂರು | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ