ಭಾರತದ ತ್ರಿವರ್ಣ ಧ್ವಜ
From Wikipedia
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು, ಈ ಸಭೆ.
ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ - ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.
ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳುಪು, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ.