ಭಾಸ್ಕರಾಚಾರ್ಯ
From Wikipedia
ಭಾಸ್ಕರಾಚಾರ್ಯ (೧೧೧೪ - ೧೧೮೫), ಅಥವಾ ಎರಡನೆಯ ಭಾಸ್ಕರ, ಭಾರತದ ಗಣಿತಜ್ಞ ಹಾಗೂ ಖಗೋಳ ಶಾಸ್ತ್ರಜ್ಞ.
ಕರ್ನಾಟಕದ ಬಿಜಾಪುರದ ಬಳಿ ಬಿಜ್ಜಡ ಬೀಡ ಎಂಬಲ್ಲಿ ಜನಿಸಿದ ಭಾಸ್ಕರಾಚಾರ್ಯ ಉಜ್ಜಯಿನಿಯ ಖಗೋಳಶಾಸ್ತ್ರ ಕೇಂದ್ರದಲ್ಲಿ ಮುಖ್ಯಸ್ಥನಾದನು. ಅಲ್ಲಿ ವರಾಹಮಿಹಿರ ಮತ್ತು ಬ್ರಹ್ಮಗುಪ್ತರ ಗಣಿತ ಸಂಪ್ರದಾಯವನ್ನು ಮುಂದುವರೆಸಿದನು. ದಶಮಾನ ಪದ್ದತಿ ಹಾಗೂ ಆಧುನಿಕ ಬೀಜಗಣಿತದಲ್ಲಿ ಉಪಯೋಗಿಸಲ್ಪಡುವ ಅಕ್ಷರಪದ್ದತಿಯನ್ನು ಮೊದಲಿಗೆ ಬಳಕೆಗೆ ತಂದವರು ಇವರು.
ಭಾಸ್ಕರಾಚಾರ್ಯನ ಮುಖ್ಯಕೃತಿಗಳು:
- ಲೀಲಾವತಿ (ಮುಖ್ಯವಾಗಿ ಅಂಕಗಣಿತದ ಬಗ್ಗೆ, ತನ್ನ ಮಗಳ ಮನೋರಂಜನೆಗಾಗಿ ಬರೆದದ್ದೆಂದು ಹೇಳಲಾಗುತ್ತದೆ).
- ಬೀಜಗಣಿತ
- ಸಿದ್ಧಾಂತಶಿರೋಮಣಿ: ಇದರಲ್ಲಿ ಎರಡು ಭಾಗಗಳಿವೆ:
- ಗೋಳಾಧ್ಯಾಯ
- ಗ್ರಹಗಣಿತ