ಯಮುನಾ
From Wikipedia
ಯಮುನಾ ನದಿ ಹಿಮಾಲಯದಲ್ಲಿ ಹುಟ್ಟಿ ಮೆಲ್ಲಗೆ ಹರಿಯುತ್ತಾ ತ್ರಿವೇಣಿ ಸಂಗಮವೆಂದು ಕರೆಸಿಕೊಳ್ಳುವ ಅಲಹಾಬಾದ್ ನ ಪ್ರಯಾಗರಾಜ ಎಂಬಲ್ಲಿ ಗುಪ್ತಗಾಮಿನಿ ಸರಸ್ವತಿ ನದಿ ಹಾಗೂ ಗಂಗಾ ನದಿಗೆ ಸೇರಿಕೊಳ್ಳುತ್ತದೆ. ಯಮುನಾ ನದಿ ಹುಟ್ಟುವ ಆ ಸ್ಥಳದಲ್ಲಿ 'ಯಮುನಾದೇವಿಯ' ಜಮುನೋತ್ರಿ ದೇವಾಲಯವಿದೆ.
[ಬದಲಾಯಿಸಿ] ವಿವಿಧ ಹೆಸರುಗಳು
ಯಮುನೆಯನ್ನು ಜಮುನ ಎಂದೂ ಕರೆಯುತ್ತಾರೆ. ಪ್ರಸಿದ್ದ ಇತಿಹಾಸಕಾರ ತಾಲೆಮಿಯ ಬಾಯಲ್ಲಿ ದಯಾಮೌನ ಎಂದೂ, ಲೀನಿ ಬಾಯಲ್ಲಿ 'ಜೋಮಾನ್ಸ್' ಎಂದೂ ,ಅರಿಯನ್ ಎಂಬಾತನ ಬಾಯಲ್ಲಿ ಜೋಬೇರ್ಸ್ ಎಂದೂ ಹೆಸರು ಪಡೆದಿದೆ. ಪ್ರಯಾಗ್ ದಲ್ಲಿನ ಹರಿದ್ವಾರದ ವರೆಗೆ ಗಂಗಾ-ಯಮುನಾ ನದಿಗಳು ಸೇರುವವರೆಗಿನ ಬಯಲನ್ನು ಅಂತರ್ವೇದಿ, ಶಾಶಸ್ತಳಿ ಮತ್ತು ಬ್ರಹ್ಮಾವರ್ತ ಎಂದೂ ಕರೆಯಲಾಗಿದೆ.
[ಬದಲಾಯಿಸಿ] ಪುರಾಣ
ಪೌರಾಣಿಕವಾಗಿ ಯಮನ ತಂಗಿಯೇ ಆದ ಯಮುನೆ, ವಿವಶ್ವತ ಮತ್ತು ಸಂಜನಾರ ಮಗಳು. ಯಮುನಾ ನದಿಯಿಂದಾದ ಕಲ್ಪಿ ದ್ವೀಪದಲ್ಲಿಯೇ ಮಹಾಭಾರತದ ವೇದವ್ಯಾಸರು ಜನಿಸಿದ್ದು. ಯಮುನಾ ನದಿಯ ಬೊಗಸೆಯಷ್ಟ್ಟು ನೀರು 'ಸೋಮಯಾಗ'ದ ಸಾಧನೆಗೆ ಕಾರಣವಾಯಿತಂತೆ. ಕೃಷ್ಣನ ಬಾಲ್ಯ ಕೂಡ ಯಮುನಾ ನದಿಯ ದಂಡೆಯ ಮೇಲೆ ಕಳೆಯಿತು.
[ಬದಲಾಯಿಸಿ] ಇತರೆ ವಿಷಯಗಳು
ಯಮುನೆಯ ಮೊದಲ ಕಾಲುವೆಯನ್ನು ೧೮೩೦ ರಲ್ಲಿ ತೆರೆಯಲಾಯಿತು. ಸಹಾರನ್ ಪುರ, ಮುಝಫರ್ ನಗರ, ಮೀರತ್ ಜಿಲ್ಲೆಗಳಿಗೆ ನೀರುಣಿಸುವ ಇದು, ಯಮುನೆಯ ಪೂರ್ವ ಕಾಲುವೆ. ಪಶ್ಚಿಮ ಕಾಲುವೆ ಅಂಬಾಲ, ಕರ್ನಾಲ್, ಹಿಸ್ಸಾರ್, ದಿಲ್ಲಿ ಪ್ರದೇಶಗಳಲ್ಲಿ ಕೃಷಿಗೆ ಆಧಾರವಾಗಿದೆ. ಈ ಕಾಲುವೆಯನ್ನು ೧೩೫೬ ತ್ರಲ್ಲಿ ಮೂರನೇ ಫಿರೂಜ್ ಶಹ ಸುಲ್ತಾನ ನಿರ್ಮಿಸಿದ. ೧೫೬೮ ರಲ್ಲಿ ಅಕ್ಬರ್ ಬಾದಶಹನಿಂದ ಜೀರ್ಣೋದ್ದಾರ ಹೊಂದಿತು. ತನ್ನ ಜನ್ಮಸ್ಥಾನವಾದ ಕಲಿಂದ ಶಿಖರದಿಂದ ೮೬೦ ಮೈಲಿ ಹರಿದು ಗಂಗೆಯನ್ನು ಸೇರುವ ಈ ಕಲಿಂದಕನ್ಯೆ ಅರ್ಥಾತ್ ಯಮುನೆಗೆ ಬಾನ್ ಗಂಗಾ, ಚಂಬಲ್ ಹಾಗೂ ಬೇತ್ವಾ ನದಿಗಳು ಸೇರುತ್ತದೆ. ಯಮುನೆಯ ನೀರು ತಿಳಿನೀಲಿ ಅಥವಾ ಕಪ್ಪು ಬಣ್ಣದಂತೆ ಗೋಚರಿಸುತ್ತದೆ.