ರಾಷ್ಟ್ರೀಯ ಸ್ವಯಂಸೇವಕ ಸಂಘ
From Wikipedia
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸೆಸ್ ಅಥವಾ ಆರೆಸ್ಸೆಸ್) ಭಾರತದ ಹಾಗು ವಿಶ್ವದ ಅತಿ ದೊಡ್ದ ಸ್ವಯಂಸೇವಿ ಸಂಘಟನೆ. ಸೆಪ್ಟೆಂಬರ್ ೨೭ ೧೯೨೫ನೆ ವಿಜಯದಶಮಿ ದಿನ ಇಂದಿನ ಭಾರತದ ಮಹಾರಾಷ್ಟ್ರರಾಜ್ಯದ ನಾಗಪುರದಲ್ಲಿ ಡಾ.ಕೇಶವ ಬಲಿರಾಂ ಹೆಡಗೆವಾರ್ ಈ ಸಂಘಟನೆಯನ್ನು ಹುಟ್ಟುಹಾಕಿದರು. ಹಿಂದೂ ರಾಷ್ಟ್ರೀಯವಾದ ಬಲಪಂಥೀಯ ಸಂಘಟನೆಯೆಂದು ಸಾಮಾನ್ಯವಾಗಿ ಪರಿಗಣಿಸಲ್ಪಡುವ ಈ ಸಂಸ್ಥೆ, ೩೪ ದೇಶಗಳಲ್ಲಿ ಹರಡಿದ್ದು, ಭಾರತದ ನಾಗಪುರದಲ್ಲಿ ತನ್ನ ಮುಖ್ಯ ಕಾರ್ಯಾಲಯ ಹೊಂದಿದೆ. ಹಿಂದೂ ಸಂಘಟನೆ ಮತ್ತು ಐಕ್ಯತೆಯನ್ನು ತನ್ನ ಗುರಿಯನ್ನಾಗಿ ಹೊಂದಿರುವ ಈ ಸಂಸ್ಥೆಗೆ ಹೊಂದಿಕೊಂಡಿರುವ ಇತರ ಸಂಸ್ಥೆಗಳನ್ನು ಒಟ್ಟಾಗಿ ಸೇರಿಸಿ ಸಾಮಾನ್ಯವಾಗಿ "ಸಂಘ ಪರಿವಾರ" ಎಂದು ಕರೆಯಲಾಗುತ್ತದೆ. ಸುಮಾರು ಆರು ವರ್ಷ ಭಾರತದ ಆಡಳಿತ ನೆಡಸಿದ ಭಾರತೀಯ ಜನತಾ ಪಕ್ಷ ಈ ಸಂಸ್ಥೆಯ ರಾಜಕೀಯ ಮುಖ ಎಂದು ಹಲವರು ಪರಿಗಣಿಸುತ್ತಾರೆ.