ವ್ಯಾಸರಾಯರು
From Wikipedia
ಪರಿವಿಡಿ |
[ಬದಲಾಯಿಸಿ] ಕಾಲ
ಕ್ರಿ.ಶ.೧೪೪೭ -೧೫೪೮. ವ್ಯಾಸರಾಯರ ಜೀವನದ ಅವಧಿ ನೂರು ವರ್ಷಗಳು. ಕೆಲವು ವಿದ್ವಾಂಸರು ವ್ಯಾಸರಾಯರು ಜೀವಿಸಿದ್ದ ಕಾಲ ೧೪೪೭-೧೫೩೯ ಇರಬಹುದೆಂದು ಅಭಿಪ್ರಾಯಪಡುತ್ತಾರೆ.
[ಬದಲಾಯಿಸಿ] ಜೀವನ
ಜನ್ಮಸ್ಥಳ - ಮೈಸೂರು ಜಿಲ್ಲೆಯ ಬನ್ನೂರು. ವ್ಯಾಸರಾಯರ ತಂದೆ ರಾಮಾಚಾರ್ಯರು ಮತ್ತು ತಾಯಿಯ ಹೆಸರು ಸೀತಾಬಾಯಿ. ವ್ಯಾಸರಾಯರ ಪೂರ್ವಾಶ್ರಮದ ಹೆಸರು ಯತಿರಾಜ. ಅಬ್ಬೂರಿನ ಬ್ರಹ್ಮಣ್ಯತೀರ್ಥರಿಂದ ಸನ್ಯಾಸ ದೀಕ್ಷೆ ಸ್ವೀಕರಿಸಿದರೆಂದು ತಿಳಿದುಬರುತ್ತದೆ.
ವ್ಯಾಸರಾಯರು ವಿಜಯ ನಗರ ಸಾಮ್ರಾಜ್ಯಕ್ಕೆ ರಾಜಗುರುಗಳಾಗಿದ್ದರು. ಮಠಾಧಿಪತಿಗಳಾಗಿ ಒಂದೆಡೆಗೆ ರಾಜಗುರುಗಳು ಎನ್ನಿಸಿದ್ದರೆ, ಮತ್ತೊಂದೆಡೆ ಧರ್ಮೋಪದೇಶಕರೂ ಆಗಿದ್ದರು. ಸಾಳುವ ನರಸಿಂಹನ ಆಳ್ವಿಕೆಯ ಕಾಲದಿಂದ, ಅಚ್ಚುತರಾಯನ ಆಳ್ವಿಕೆಯವರೆಗೆ, ಸುಮಾರು ಅರವತ್ತು ವರ್ಷಗಳ ಕಾಲ ಸಕಲ ರಾಜಮಹಾರಾಜರಿಂದ ಸನ್ಮಾನಿಸಲ್ಪಟ್ಟಿದ್ದರು. ವಿಜಯನಗರದ ಪ್ರಖ್ಯಾತ ದೊರೆಯೆನಿಸಿದ್ದ ಕೃಷ್ಣದೇವರಾಯನು ವ್ಯಾಸರಾಯರನ್ನು ಗುರುಗಳಾಗಿ ಸ್ವೀಕರಿಸಿದ್ದನೆಂದು ತಿಳಿದುಬಂದಿದೆ.
[ಬದಲಾಯಿಸಿ] ಕೃತಿಗಳು
ದಾಸಸಾಹಿತ್ಯ ಪರಂಪರೆಯನ್ನು ಶ್ರೀಪಾದರಾಜರ ತರುವಾಯ ಬೆಳೆಸಿದವರೆಂದರೆ ವ್ಯಾಸರಾಯರು. ಈವರೆಗೆ ವ್ಯಾಸರಾಯರು ರಚಿಸಿರುವ ೧೧೯ ಕೀರ್ತನೆಗಳು ಲಭ್ಯವಾಗಿವೆ. ಇದರಲ್ಲಿ ಉಗಾಭೋಗಗಳು ಸೇರಿವೆ. ಅಂಕಿತ ಪ್ರಧಾನ ಪಧ್ಧತಿ ಇವರಿಂದಲೇ ಪ್ರಾರಂಭವಾಯಿತು. ಶ್ರೀಕೃಷ್ಣ ಎಂಬುದು ವ್ಯಾಸರಾಯರ ಅಂಕಿತ.
[ಬದಲಾಯಿಸಿ] ಕಾಲವಾದ ಸ್ಥಳ ಮತ್ತು ದಿನ
ವ್ಯಾಸರಾಯರು ೧೫೪೮ , ಫಾಲ್ಗುಣ ಮಾಸದ ಚತುರ್ಧಿ ದಿನದಂದು, ಹಂಪೆ ಯಲ್ಲಿ ಕಾಲವಾದರು. ಇವರ ಬೃಂದಾವನವು ಆನೆಗೊಂದಿಯ ಸಮೀಪವಿರುವ ತುಂಗಭದ್ರಾ ದ್ವೀಪದಲ್ಲಿದೆ. ಈ ಸ್ಥಳವನ್ನು ನವ ಬೃಂದಾವನ ಎಂದು ಕರೆಯಲಾಗುತ್ತದೆ.
[ಬದಲಾಯಿಸಿ] ವ್ಯಾಸರಾಯರ ಎರಡು ಉಗಾಭೋಗಗಳು
- ೧
ಜಾರತ್ವದಲಿ ಮಾಡಿದ ಪಾಪಗಳಿಗೆಲ್ಲ
ಗೋಪೀಜನಜಾರನೆಂದರೆ ಸಾಲದೇ
ಚೋರತ್ವದಲಿ ಮಾಡಿದ ಪಾಪಗಳಿಗೆಲ್ಲ
ನವನೀತ ಚೋರನೆಂದರೆ ಸಾಲದೇ
ಕ್ರೂರತ್ವವನು ಮಾಡಿದ ಪಾಪಗಳಿಗೆಲ್ಲ
ಮಾವನ ಕೊಂದವನೆಂದರೆ ಸಾಲದೇ
ಪ್ರತಿ ದಿವಸ ಮಾಡಿದ ಪಾಪಗಳಿಗೆಲ್ಲ
ಪತಿತಪಾವನನೆಂದರೆ ಸಾಲದೇ
ಇಂತಿಪ್ಪ ಮಹಿಮೆಯೊಳೊಂದನಾದರೂ ಒಮ್ಮೆ
ಸಂತತ ನೆನೆವರ ಸಲಹುವ ಸಿರಿಕೃಷ್ಣ
- ೨
ನಿನ್ನ ಎಂಜಲನುಟ್ಟು ನಿನ್ನ ಬೆಳ್ಳುಡೆಯುಟ್ಟು
ಮುನ್ನ ಮಾಡಿದ ಕರ್ಮ ಬೆನ್ನ ಬಿಡದಿದ್ದರೆ
ನಿನ್ನ ಓಲೈಸಲೇಕೋ ಕೃಷ್ಣ
ಸಂಚಿತವನುಂಡು ಪ್ರಪಂಚದೊಳಗೆ ಬಿದ್ದು
ನಿನ್ನ ಓಲೈಸಲೇಕೋ ಕೃಷ್ಣ
ದಿನಕರನುದಿಸಿ ಕತ್ತಲು ಪೋಗದಿದ್ದರೆ
ಹಗಲೇನೋ ಇರುಳೇನೂ ಕುರುಡಗೆ ಸಿರಿಕೃಷ್ಣ