ಅಕ್ಕಮಹಾದೇವಿ
From Wikipedia
ಅಕ್ಕಮಹಾದೇವಿ - ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು.
[ಬದಲಾಯಿಸಿ] ಶಿವಶರಣೆ ಅಕ್ಕಮಹಾದೇವಿ
ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸಬಹುದಾಗಿದೆ. ಕಿರಿಯ ವಯಸ್ಸಿನಲ್ಲಿ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು. ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿಯಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನೆಡೆದ ಅಕ್ಕ, ಹಲವಾರು ಭಕ್ತರಿಗೆ ಮಾದರಿಯಾಗಿದ್ದಾಳೆ.
[ಬದಲಾಯಿಸಿ] ಜೀವನ
ಶಿವಮೊಗ್ಗ ಜಿಲ್ಲೆಯಲ್ಲಿರುವ ಉಡುತಡಿಯಲ್ಲಿ ಜನಸಿ, ಬಸವ ಕಲ್ಯಾಣದ ಅನುಭವ ಮಂಟಪದಲ್ಲಿ ಅಲ್ಲಮಪ್ರಭು, ಬಸವಣ್ಣ, ಚೆನ್ನಬಸವಣ್ಣ, ಸಿದ್ಧರಾಮೇಶ್ವರ ಮೊದಲಾದ ಶರಣರೊಡನೆ ಕಲ್ಯಾಣದ ಕ್ರಾಂತಿಯಲ್ಲಿ ತಮ್ಮನ್ನು ತೊಡಗಿಸಿದರಲ್ಲದೇ, ಮಲ್ಲಿಕಾರ್ಜುನ ಎಂಬ ಅಂಕಿತದಲ್ಲಿ ವಚನ ಸಾಹಿತ್ಯಕ್ಕೆ (ಶರಣ ಸಾಹಿತ್ಯ) ತಮ್ಮದೇ ಆದ ಸಾಹಿತ್ಯಸೇವೆಯನ್ನು ಸಲ್ಲಿಸಿದ್ದಾರೆ.
[ಬದಲಾಯಿಸಿ] ಶಿವೈಕ್ಯ
ಕೊನೆಗೆ ತನ್ನ ಇಷ್ಟದೈವ ಮಲ್ಲಿಕಾರ್ಜುನನಲ್ಲಿ ಶ್ರಿಶೈಲದ ಕದಳಿವನದಲ್ಲಿ ಐಕ್ಯರಾದರು ಅಕ್ಕಮಹಾದೇವಿ.