ಎಸ್.ಜಾನಕಿ
From Wikipedia
ಎಸ್.ಜಾನಕಿ (ಜನನ:೧೯೩೮ ಏಪ್ರಿಲ್ ೨೩ ) ದಕ್ಷಿಣಭಾರತದ ಪ್ರಸಿದ್ಧ ಗಾಯಕಿಯರಲ್ಲೊಬ್ಬರು. ಮೂಲತ: ಆಂಧ್ರದವರಾದರೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ಹಾಡಿದ್ದಾರೆ.
೧೯೩೮ ಏಪ್ರಿಲ್ ೨೩ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪಲ್ಲಪಟ್ಲ ಎಂಬಲ್ಲಿ ಅವರ ಜನನ. ಅವರು ೩ ವರ್ಷದ ಮಗುವಾಗಿದ್ದಾಗಿನಿಂದ ಹಾಡಲು ಆರಂಭಿಸಿದರೆಂದು ಹೇಳಲಾಗುತ್ತದೆ. ೧೯೫೭ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರ ಕೃಷ್ಣಗಾರುಡಿಗಾಗಿ ಇವರು ಪ್ರಪ್ರಥಮವಾಗಿ ಹಾಡಿದ್ದು. ಇದರ ಶೀರ್ಷಿಕೆ ಗೀತೆ 'ಭಲೇ ಭಲೇ ಗಾರುಡಿ ಬರುತಿಹ ನೋಡಿ' ಸಂಗೀತ ನಿರ್ದೇಶಕ ಪೆಂಡ್ಯಾಲ ಅವರೊಂದಿಗೆ ಹಾಡಿದ್ದಾರೆ. ಇಲ್ಲಿಯವರೆಗೂ ಸುಮಾರು ೧೭,೦೦೦ ಗೀತೆಗಳಿಗೆ ಧ್ವನಿ ನೀಡಿದ್ದಾರೆ. ನಾಲ್ಕು ಬಾರಿ ರಾಷ್ಟೀಯ ಪುರಸ್ಕಾರ ಪಡೆದಿದ್ದಾರೆ. ಇದಲ್ಲದೆ ತಮಿಳು, ತೆಲುಗು, ಮಲೆಯಾಳಂ ಭಾಷೆಗಳಲ್ಲಿ ಹಾಡಿ ಅಲ್ಲಿಯ ರಾಜ್ಯ ಪ್ರಶಸ್ತಿಗಳನ್ನೂ ಪಡೆದಿದ್ದಾರೆ.
[ಬದಲಾಯಿಸಿ] ಎಸ್.ಜಾನಕಿ ಕಂಠದಲ್ಲಿರುವ ಕೆಲವು ಗೀತೆಗಳು
- ಕರೆಯೆ ಕೋಗಿಲೆ ಮಾಧವನ - ನವಜೀವನ
- ಸುಖದ ಸ್ವಪ್ನಗಾನಾ - ಮರೆಯದ ಹಾಡು
- ಗಗನವು ಎಲ್ಲೋ ಭೂಮಿಯು ಎಲ್ಲೋ- ಗೆಜ್ಜೆಪೂಜೆ
- ನಾ ಮೆಚ್ಚಿದ ಹುಡುಗನಿಗೆ - ನಾ ಮೆಚ್ಚಿದ ಹುಡುಗ
- ಬಂದಾ ಬಂದಾ ಮೇಘರಾಜ - ಸಿಪಾಯಿ
- ಹೂವೊಂದು ಬೇಕು ಬಳ್ಳಿಗೆ - ಪಾವನ ಗಂಗಾ
- ಒಲವಿನ ಗೆಳೆಯನೆ ನಿನಗೆ - ನಾನಿರುವುದೇ ನಿನಗಾಗಿ
- ಅರಳಿದೆ ಮುದುಡಿದ ತಾವರೆ ಅರಳಿದೆ- ಮುದುಡಿದ ತಾವರೆ ಅರಳಿತು
- ಕೇಳಿದ್ದು ಸುಳ್ಳಾಗಬಹುದು - ರಾಮ ಲಕ್ಷ್ಮಣ
- ಏಕೋ ಈ ಕೋಪ ಶಂಕರಾ - ಭಕ್ತ ಸಿರಿಯಾಳ
- ಜ್ಯೋತಿ ಯಾವ ಜಾತಿಯಮ್ಮ - ಕಾವೇರಿ
- ಶಿವ ಶಿವ ಎನ್ನದ ನಾಲಿಗೆಯೇಕೆ - ಹೇಮಾವತಿ
- ಏನನೋ ಕೇಳುತಿದೆ - ಗಲಾಟೆ ಸಂಸಾರ
- ತಾಯಿಯ ತಂದೆಯ ಮಮತೆ - ಮಧುರ ಸಂಗಮ
ಕನ್ನಡ ಚಿತ್ರರಂಗದ ಹಿನ್ನೆಲೆ ಗಾಯಕಿಯರು
ತ್ರಿಪುರಾಂಬ | ಕಮಲಾ ಬಾಯಿ | ಎಸ್.ಡಿ.ಸುಬ್ಬುಲಕ್ಷ್ಮಿ | ಲಕ್ಷ್ಮಿ ಬಾಯಿ | ಎಂ.ವಿ.ರಾಜಮ್ಮ | ಅಮೀರ್‍ಬಾಯಿ ಕರ್ನಾಟಕಿ | ಬಿ.ಜಯಮ್ಮ | ಪಿ. ಲೀಲಾ | ಪಿ.ಸುಶೀಲ | ಎಸ್.ಜಾನಕಿ | ಎಲ್.ಆರ್. ಈಶ್ವರಿ | ಬಿ.ಕೆ. ಸುಮಿತ್ರಾ | ವಾಣಿ ಜಯರಾಂ | ಕಸ್ತೂರಿ ಶಂಕರ್ | ಬೆಂಗಳೂರು ಲತಾ | ಸುಲೋಚನ | ಎಸ್.ಪಿ.ಶೈಲಜಾ | ಬಿ.ಆರ್. ಛಾಯಾ | ರತ್ನಮಾಲ ಪ್ರಕಾಶ್ | ಮಂಜುಳಾ ಗುರುರಾಜ್ | ಕವಿತಾ ಕೃಷ್ಣಮೂರ್ತಿ | ಚಿತ್ರಾ | ಚಂದ್ರಿಕಾ ಗುರುರಾಜ್ | ಲತಾ ಹಂಸಲೇಖ | ಸೌಮ್ಯ ರಾವ್ | ಅನುರಾಧ ಶ್ರೀರಾಮ್ | ನಂದಿತಾ | ಪಲ್ಲವಿ ಎಂ.ಡಿ | ಶಮಿತಾ ಮಲ್ನಾಡ್ | ಚೈತ್ರ | ಸುಮಾ ಶಾಸ್ತ್ರಿ | ಸುಪ್ರಿಯ ಆಚಾರ್ಯ | ಭವತಾರಿಣಿ