ಕನ್ನಡ ಸಾಹಿತ್ಯ ಸಮ್ಮೇಳನ
From Wikipedia
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆವಹಿಸಿದ್ದಾರೆ.