New Immissions/Updates:
boundless - educate - edutalab - empatico - es-ebooks - es16 - fr16 - fsfiles - hesperian - solidaria - wikipediaforschools
- wikipediaforschoolses - wikipediaforschoolsfr - wikipediaforschoolspt - worldmap -

See also: Liber Liber - Libro Parlato - Liber Musica  - Manuzio -  Liber Liber ISO Files - Alphabetical Order - Multivolume ZIP Complete Archive - PDF Files - OGG Music Files -

PROJECT GUTENBERG HTML: Volume I - Volume II - Volume III - Volume IV - Volume V - Volume VI - Volume VII - Volume VIII - Volume IX

Ascolta ""Volevo solo fare un audiolibro"" su Spreaker.
CLASSICISTRANIERI HOME PAGE - YOUTUBE CHANNEL
Privacy Policy Cookie Policy Terms and Conditions
ಕಿತ್ತೂರು ಚೆನ್ನಮ್ಮ - Wikipedia

ಕಿತ್ತೂರು ಚೆನ್ನಮ್ಮ

From Wikipedia

ಕಿತ್ತೂರಿನ ಇತಿಹಾಸವು ಕ್ರಿ.ಶ. ೧೫೮೬ರಿಂದಲೇ ಆರಂಭವಾಗುತ್ತದೆ. ಮೂಲತಃ ಮಲೆನಾಡಿನ ಗೌಡ ಮನೆತನದಿಂದ ಬಂದ ಮಲ್ಲ ಹೆಸರಿನ ಸೋದರರಿಬ್ಬರು ವಿಜಾಪುರದ ಆದಿಲಶಾಹಿ ಸೈನ್ಯದಲ್ಲಿ ಸೇರಿಕೊಂಡಿದ್ದರು. ಈ ಸೋದರರಲ್ಲಿ ಹಿರಿಯ ಮಲ್ಲನಿಗೆ “ ಶಮಶೇರ ಜಂಗಬಹಾದ್ದೂರ ” ಎನ್ನುವ ಬಿರುದನ್ನು ಹಾಗೂ ಹುಬ್ಬಳ್ಳಿ ವಿಭಾಗದ ಸರದೇಶಮುಖಿಯನ್ನು ನೀಡಲಾಗಿತ್ತು.

ವಿಜಾಪುರದ ಪತನದ ನಂತರ ಕಿತ್ತೂರು ದೇಸಾಯಿಗಳು ತಮ್ಮ ರಕ್ಷಣೆಗಾಗಿ ಅನೇಕ ಕಾಳಗಗಳನ್ನು ಎದುರಿಸಬೇಕಾಯಿತು. ಬ್ರಿಟಿಷರು ಭಾರತದಲ್ಲಿ ಕಾಲೂರುವ ಸಮಯದಲ್ಲಿ ಇಲ್ಲಿಯ ರಾಜಕೀಯ ಪರಿಸ್ಥಿತಿ ಬಹಳ ವಿಲಕ್ಷಣವಾಗಿತ್ತು. ಉತ್ತರ ಹಿಂದುಸ್ತಾನದಲ್ಲಿ ಮೊಗಲ ಬಾದಶಾಹಿ ನಿರ್ಬಲವಾಗಿತ್ತು.ದಕ್ಷಿಣದಲ್ಲಿ ಸ್ವರಾಜದ ವಿಸ್ತರಣೆಗಾಗಿ ಹೋರಾಡುತ್ತಿದ್ದ ಪೇಶವಾಯಿ, ಆಕ್ರಮಣಕಾರಿ ಧೋರಣೆಯ ಹೈದರಾಬಾದಿನ ನಿಜಾಮಶಾಹಿ ಹಾಗು ಮೈಸೂರಿನ ಹೈದರ್ ಅಲಿ ಇವರೆಲ್ಲರ ನಡುವೆ ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದ ಚಿಕ್ಕ ಪುಟ್ಟ ಪಾಳೆಯಗಾರರು. ಇಂತಹ ರಾಜಕೀಯ ಪರಿಸ್ಥಿತಿ ಧೂರ್ತ, ಕ್ರೂರ, ಹಾಗು adventurist ಧೋರಣೆಯ ಬ್ರಿಟಿಷ ಈಸ್ಟ ಇಂಡಿಯಾ ಕಂಪನಿಗೆ ಸುವರ್ಣಾವಕಾಶವನ್ನು ಒದಗಿಸಿತ್ತು. ಇಂತಹ ಸಮಯದಲ್ಲಿ ಮಲ್ಲಸರ್ಜನ ದೊರೆಯನ್ನು ಟಿಪ್ಪು ಸುಲ್ತಾನನು ಸೆರೆ ಹಿಡಿದು ಕಪಾಲದುರ್ಗದಲ್ಲಿ ಸೆರೆಯಿಟ್ಟಿದ್ದನು. ಉಪಾಯದಿಂದ ತಪ್ಪಿಸಿಕೊಂಡ ದೊರೆ ೧೮೦೩ರಲ್ಲಿ ವೆಲ್ಲೆಸ್ಲಿಗೆ ನೆರವು ನೀಡಿ ಕಿತ್ತೂರನ್ನು ಭದ್ರಗೊಳಿಸಿದ್ದನು. ೧೮೦೯ರಲ್ಲಿ ಪೇಶವೆಯವರಿಗೆ ರೂ.೧,೭೫,೦೦೦ ಕೊಟ್ಟು, ಅವರ ಸ್ಥಾನಿಕ ಕಾವಲು ಸೈನ್ಯದ ಖರ್ಚನ್ನು ನೀಡಿ ಅವರಿಂದ ಸನದು ಪಡೆದಿದ್ದನು. ಆದರೆ ಪೇಶ್ವೆಯವರು ವಿಶ್ವಾಸಘಾತ ಮಾಡಿ ಮಲ್ಲಸರ್ಜನನ್ನು ಸೆರೆ ಹಿಡಿದು ೩ ವರ್ಷ ಕಾಲ ಪುಣೆಯಲ್ಲಿಟ್ಟರು. ೧೮೧೬ರಲ್ಲಿ ಬಿಡುಗಡೆ ಹೊಂದಿ ಮರಳುವಾಗ ದಾರಿಯಲ್ಲಿಯೆ ಮಲ್ಲಸರ್ಜನು ಕೊನೆಯುಸಿರನ್ನೆಳೆದ. ಅವನ ಮಗ ಶಿವಲಿಂಗ ರುದ್ರಸರ್ಜನು ಮರಾಠಾ ಹಾಗು ಟೀಪು ಸುಲ್ತಾನ ಇವರ ಕಿರಿಕಿರಿ ತಪ್ಪಿಸಲು ಬ್ರಿಟಿಶರ ಜೊತೆಗೆ ಸ್ನೇಹದಿಂದಿದ್ದ. ಆದರೆ ಅದೆಂತಹ ಸ್ನೇಹ! ಪ್ರತಿ ವರ್ಷ ರೂ. ೧,೭೦,೦೦೦ ಕಾಣಿಕೆ ಕೊಡುವ ಕರಾರಿನ ಮೇಲೆ ಬ್ರಿಟಿಷರು ಈ ದೊರೆಗೆ ಸನ್ನದು ನೀಡಿದರು. ಶಿವಲಿಂಗರುದ್ರಸರ್ಜನು ೧೧ ಸಪ್ಟಂಬರ ೧೮೨೪ರಂದು ವಾರಸದಾರರಿಲ್ಲದೆ ತೀರಿಕೊಂಡನು. ಈ ಎಳೆವಯಸ್ಸಿನ ದೊರೆಯ ಹೆಂಡತಿ ವೀರಮ್ಮನಿಗೆ ಆಗ ೧೧ ವರ್ಷ ವಯಸ್ಸು! ಮರಣದ ಪೂರ್ವದಲ್ಲಿ ಶಿವಲಿಂಗರುದ್ರಸರ್ಜ ಮಾಸ್ತಮರಡಿ ಗೌಡರ ಪುತ್ರ ಶಿವಲಿಂಗಪ್ಪನನ್ನು ದತ್ತಕ ತೆಗೆದುಕೊಂಡ. ಈ ದತ್ತಕವನ್ನು ಧಾರವಾಡದ ಕಲೆಕ್ಟರ ಥ್ಯಾಕರೆ ತಿರಸ್ಕರಿಸುತ್ತಾನೆ! ೧೩ ಸಪ್ಟಂಬರ ೧೮೨೪ ರಂದು ಥ್ಯಾಕರೆ ಸ್ವತಃ ಕಿತ್ತೂರಿಗೆ ಬಂದು ಕಂಪನಿ ಸರ್ಕಾರದಿಂದ ಮುಂದಿನ ಆದೇಶ ಬರುವವರೆಗೂ ತಾತ್ಕಾಲಿಕವಾಗಿ ಮಲ್ಲಪ್ಪಶೆಟ್ಟಿ ಹಾಗು ಹಾವೇರಿ ವೆಂಕಟರಾವ ಇವರನ್ನು ಸಂಸ್ಥಾನದ ವ್ಯವಹಾರ ನಿರ್ವಹಿಸಲು ನೇಮಕ ಮಾಡುತ್ತಾನೆ ಹಾಗು ಕಿತ್ತೂರಿನ ಭಂಡಾರಕ್ಕೆ ಬೀಗಮುದ್ರೆ ಹಾಕುತ್ತಾನೆ.

ಆದರೆ ಇದನ್ನು ಕೆಚ್ಚೆದೆಯಿಂದ ಎದುರಿಸಿದವಳು ಮೃತ ಶಿವಲಿಂಗರುದ್ರಸರ್ಜನ ಮಲತಾಯಿ ಚೆನ್ನಮ್ಮ!

ಚೆನ್ನಮ್ಮ ಹುಟ್ಟಿದ್ದು ೧೭೭೮ರಲ್ಲಿ. ಬೆಳಗಾವಿಯಿಂದ ಉತ್ತರಕ್ಕೆ ಸುಮಾರು ೬ ಕಿ.ಮಿ. ದೂರದಲ್ಲಿರುವ ಕಾಕತಿ ಅವಳ ಹುಟ್ಟೂರು. ತಂದೆ ಕಾಕತಿಯ ದೇಸಾಯಿ ಧೂಳಪ್ಪಗೌಡರು. ಚನ್ನಮ್ಮ ಎಳೆ ವಯಸ್ಸಿನಲ್ಲಿಯೆ ಕುದುರೆ ಸವಾರಿ ಹಾಗು ಬಿಲ್ಲುವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದಳು. ಈ ಕಠಿಣ ಪರಿಸ್ಥಿತಿಯಲ್ಲಿ ಎದೆಗುಂದದೆ ಅವಳು ರಾಜನಿಷ್ಠರಾದ ಗುರುಸಿದ್ದಪ್ಪ, ಹಿಮ್ಮತಸಿಂಗ, ನರಸಿಂಗರಾವ , ಗುರುಪುತ್ರ ಮತ್ತು ಇತರ ಬೆಂಬಲಿಗರ ನೆರವಿನಿಂದ ತನ್ನ ದತ್ತಕ ಮೊಮ್ಮಗನಿಗೆ ಪಟ್ಟಗಟ್ಟಿದಳು. ಇದನ್ನು ಜಾನಪದ ಗೀತೆಯೊಂದು ಈ ರೀತಿ ವರ್ಣಿಸುತ್ತದೆ:

“……………………

ಹಿಮ್ಮತ್ತು ಬಾಳ ಹಿಡಿದಳು ಚನ್ನವ್ವ

ಮೊಮ್ಮಗ್ಗ ಪಟ್ಟಗಟ್ಟಿ

………………………….”.

ಕಿತ್ತೂರಿನ ಮೇಲೆ ಬ್ರಿಟಿಷರು ಮಾಡಬಹುದಾದ ಆಕ್ರಮಣವನ್ನು ತಪ್ಪಿಸಲು ಚೆನ್ನಮ್ಮ ಥ್ಯಾಕರೆಗೆ, ಮನ್ರೋನಿಗೆ ಹಾಗು ಚಾಪ್ಲಿನ್ನನಿಗೂ ಸಹ ಸಂಧಾನಕ್ಕಾಗಿ ಪತ್ರ ಬರೆದಿದ್ದಾಳೆ. ಅದರೆ ಬ್ರಿಟಿಷರು ಕಿತ್ತೂರಿನ ಒಡೆತನವನ್ನೆ ಅಪೇಕ್ಷಿಸಿದಾಗ, ಚೆನ್ನಮ್ಮ ಮುಂದಾಲೋಚನೆಯಿಂದ ಕೊಲ್ಲಾಪುರ ಮೊದಲಾದ ನೆರೆಯ ಸಂಸ್ಥಾನಗಳ ಸಹಾಯ ಕೋರಿ ಪತ್ರವ್ಯವಹಾರ ಸಹ ಮಾಡಿದ್ದಾಳೆ. ೨೧ ಅಕ್ಟೋಬರ ೧೮೨೪ರಂದು ಥ್ಯಾಕರೆ ಕಿತ್ತೂರಿಗೆ ಬಂದನು. ಮೂರನೆಯ ದಿನ ಅಂದರೆ ಅಕ್ಟೋಬರ ೨೩ರಂದು ಕೋಟೆಯ ಮೇಲೆ ತೋಪು ಹಾರಿಸಲು ತನ್ನ ಸೈನ್ಯಕ್ಕೆ ಅಪ್ಪಣೆ ಕೊಟ್ಟ. ಥಟ್ಟನೆ ತೆಗೆದ ಕೋಟೆಯ ಬಾಗಿಲಿನಿಂದ ಸಾವಿರಾರು ಜನ ಕಿತ್ತೂರು ವೀರರು ಸರದಾರ ಗುರುಸಿದ್ದಪ್ಪನವರ ಮುಂದಾಳ್ತನದಲ್ಲಿ ಥ್ಯಾಕರೆಯ ಸೈನ್ಯದ ಮೆಲೆ ಮುಗಿಬಿದ್ದರು. ಚೆನ್ನಮ್ಮ ರಾಣಿಯ ಅಂಗರಕ್ಷಕ ಅಮಟೂರು ಬಾಳಪ್ಪನ ಗುಂಡಿಗೆ ಥ್ಯಾಕರೆ ಬಲಿಯಾದ. ಸ್ಟೀವನ್ಸನ್ ಹಾಗು ಈಲಿಯಟ್ ಸೆರೆಯಾಳಾದರು. ದೇಶದ್ರೋಹಿಗಳಾದ ಕನ್ನೂರು ವೀರಪ್ಪ, ಸರದಾರ ಮಲ್ಲಪ್ಪ ಅವರೂ ಬಲಿಯಾದರು.

ಚೆನ್ನಮ್ಮನಿಗೆ ಹಾಗು ಬ್ರಿಟಿಷರಿಗೆ ಮತ್ತೆ ಪತ್ರವ್ಯವಹಾರ ನಡೆಯುತ್ತದೆ. ೧೮೨೪ ಡಿಶಂಬರ ೨ ರಂದು ಸ್ಟೀವನ್ಸನ್ ಹಾಗು ಈಲಿಯಟ್ ಇವರ ಬಿಡುಗಡೆಯಾಗುತ್ತದೆ. ಆದರೆ ಮಾತಿಗೆ ತಪ್ಪಿದ ಬ್ರಿಟಿಷರು ದಿಶಂಬರ ೩ ರಂದು ಅಪಾರ ಸೈನ್ಯದೊಂದಿಗೆ ಮುತ್ತಿಗೆ ಹಾಕಿ ಕೋಟೆಯನ್ನು ಒಡೆಯಲು ಪ್ರಾರಂಭಿಸುತ್ತಾರೆ. ಡಿಶಂಬರ ೪ ರಂದು ಸರದಾರ ಗುರುಸಿದ್ದಪ್ಪ ಸೆರೆಯಾಳುಗುತ್ತಾರೆ. ಡಿಶಂಬರ ೫ರಂದು ಚೆನ್ನಮ್ಮ ತನ್ನ ಸೊಸೆಯರಾದ ವೀರಮ್ಮ ಮತ್ತು ಜಾನಕಿಬಾಯಿಯರ ಜೊತೆಗೆ ಕೈದಿಯಾಗುತ್ತಾಳೆ. ಡಿಶಂಬರ ೧೨ ರಂದು ಚೆನ್ನಮ್ಮ ಹಾಗು ವೀರಮ್ಮರನ್ನು ಬೈಲಹೊಂಗಲಕ್ಕೆ ಒಯ್ಯಲಾಗುತ್ತದೆ. ಅಲ್ಲಿ ೪ ವರ್ಷಗಳವರೆಗೆ ಸೆರೆಯಾಳಾಗಿ ಉಳಿದ ಚೆನ್ನಮ್ಮ ೧೮೨೫ ಫೆಬ್ರುವರಿ ೨ ರಂದು ನಿಧನಹೊಂದುತ್ತಾಳೆ. ಮುಂದೆ ಮೇ ೨೦ರಂದು ಜಾನಕಿಬಾಯಿ ನಿಧನಳಾಗುತ್ತಾಳೆ.

ಆದರೆ ದೇಶನಿಷ್ಠರ ಹೋರಾಟ ನಿಂತಿರುವದಿಲ್ಲ. ಕಾಳಗದಲ್ಲಿ ಸೆರೆ ಸಿಕ್ಕು ಆ ಮೇಲೆ ಬಿಡುಗಡೆಯಾದ ಸಂಗೊಳ್ಳಿ ರಾಯಣ್ಣ ೧೮೨೯ರಲ್ಲಿ ಹೋರಾಟ ಮುಂದುವರೆಸುತ್ತಾನೆ. ಇವನ ಹೋರಾಟಕ್ಕೆ ನೆರವು ನೀಡುತ್ತಿರುವ ಸಂಶಯದ ಮೇಲೆ ವೀರಮ್ಮನನ್ನು ಬ್ರಿಟಿಷರು ಮೊದಲು ಕುಸುಗಲ್ಲಿಗೆ, ಆ ಬಳಿಕ ಬೇರೊಂದು ಸ್ಥಳಕ್ಕೆ ಒಯ್ಯುತ್ತಾರೆ.

ಇತ್ತ ರಾಯಣ್ಣನ ಹೋರಾಟ ಮುಂದುವರೆದಿರುತ್ತದೆ. ವಿಶ್ವಾಸದ್ರೋಹಿಗಳು ಇವನ ಸಂಗಡಿಗರಂತೆ ನಟಿಸುತ್ತ ೧೮೩೦ ಫೆಬ್ರುವರಿಯಲ್ಲಿ ಇವನನ್ನು ಬ್ರಿಟಿಷರಿಗೆ ಹಿಡಿದುಕೊಡುತ್ತಾರೆ. ಕಂಪನಿ ಸರಕಾರ ಈ ಕಾರ್ಯಕ್ಕಾಗಿ ಲಿಂಗನಗೌಡ ಮತ್ತು ವೆಂಕನಗೌಡರಿಗೆ ೩೦೦ ರೂಪಾಯಿ ಬಹುಮಾನ ಕೊಡುತ್ತದೆ.

ಮೇ ೧೮೩೦ರಲ್ಲಿ ದತ್ತುಪುತ್ರ ಶಿವಲಿಂಗಪ್ಪ ಹಾಗು ಇತರ ೪೦೦ ಜನರು ಬ್ರಿಟಿಷರಿಗೆ ಸ್ವಯಂ ಸೆರೆಯಾಗುತ್ತಾರೆ. ಜುಲೈ ೧೮೩೦ರಂದು ವೀರಮ್ಮ ಸೆರೆಮನೆಯಲ್ಲಿ ಮರಣಹೊಂದುತ್ತಾಳೆ. ವಿಷ ತೆಗೆದುಕೊಂಡು ಮರಣ ಹೊಂದಿದಳೆಂದೂ, ಇಂಗ್ಲಿಶರೆ ವಿಷ ಹಾಕಿ ಕೊಂದರೆಂದೂ ಪ್ರತೀತಿಯಿದೆ.

೧೮೩೦ ಡಿಶಂಬರ ೧೬ರಂದು ಕಂಪನಿ ಸರಕಾರ ಸಂಗೊಳ್ಳಿ ರಾಯಣ್ಣ ಹಾಗು ಆತನ ಸಂಗಡಿಗರ ವಿಚಾರಣೆ ನಡೆಸುತ್ತದೆ. ಅಪರಾಧಿ(!)ಗಳಲ್ಲಿ ಕೆಲವರ ಹೆಸರು:

  • ರಾಯಣ್ಣ…….ಜಾತಿ: ಧನಗರ……ವಯಸ್ಸು: ೩೫
  • ಬಾಳನಾಯಿಕ…..ಜಾತಿ: ಬೇಡರ……ವಯಸ್ಸು: ೫೦
  • ಬಸಲಿಂಗಪ್ಪ… .ಜಾತಿ: ಲಿಂಗಾಯತ.. ವಯಸ್ಸು: ೩೦
  • ರುದ್ರನಾಯಿಕ….ಜಾತಿ: ಬೇಡರ…… ವಯಸ್ಸು: ೫೦
  • ಕರಬಸಪ್ಪ…….ಜಾತಿ: ಲಿಂಗಾಯತ.. ವಯಸ್ಸು: ೫೦
  • ಎಳಮಯ್ಯ……ಜಾತಿ: ಬೇಡರ…….ವಯಸ್ಸು: ೬೦
  • ಅಪ್ಪೂನಿ……ಜಾತಿ: ಮುಸಲ್ಮಾನ….ವಯಸ್ಸು: ೪೦
  • ಭೀಮ………..ಜಾತಿ: ಬೇಡರ…….ವಯಸ್ಸು: ೪೦
  • ರಾಣೋಜಿ ಕೊಂಡ..ಜಾತಿ: ಮರಾಠಾ..ವಯಸ್ಸು: ೩೦
  • ಕೋನೇರಿ………..ಜಾತಿ: ಮರಾಠಾ..ವಯಸ್ಸು: ೪೦
  • ಕೆಂಚಪ್ಪ……… ಜಾತಿ: ಲಿಂಗಾಯತ.. ವಯಸ್ಸು: ೩೦
  • ನ್ಯಾಮಣ್ಣ……..ಜಾತಿ: ಜೈನ……...ವಯಸ್ಸು: ೪೦
  • ಅಪ್ಪಾಜಿ ನಾಯಕ…ಜಾತಿ:ಬೇಡರ……ವಯಸ್ಸು: ೩೦.

೧೮೩೧ ಜನೆವರಿ ೨೬ ರಂದು ಸಂಗೊಳ್ಳಿ ರಾಯಣ್ಣನನ್ನು ನಂದಗಡದಲ್ಲಿ ಗಲ್ಲಿಗೇರಿಸಲಾಗುತ್ತದೆ.

ಕಿತ್ತೂರು ಇತಿಹಾಸದ ಚರಮಗೀತೆಯನ್ನಾಗಿ ಈ ಲಾವಣಿಯನ್ನು ಉದಾಹರಿಸಬಹುದು:

“ನಂದಗsಡ ಊರಾಗ ಮಂದ್ಯಾಗ ರಾಯಣ್ಣ|

ತಂದು ಶೂಲಕ್ಕ ಹಾಕ್ಯಾರೋ|

ತಂದು ಶೂಲಕ್ಕ ಹಾಕ್ಯಾರೊ – ಕಿತ್ತೂರ|

ಗೊಂದsಲ ಶೂರಗ ದುರ್ಮರಣೋ|


ಹೊಂಗಲದ ಮಠದಾಗ ಲಿಂಗಪೂಜಿಯ ಮಾಡಿ|

ಭಂಗಾಗುದೆಂದು ಎದಿಗುಂದಿ|

ಭಂಗಾಗುದೆಂದು ಎದಿಗುಂದಿ – ಚನ್ನವ್ವ|

ಉಂಗುರದ ವಜ್ರವ ನುಂಗ್ಯಾಳೋ|

(ಆಕರ:ಭಾರತ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ --ಕಿತ್ತೂರ ರಾಣಿ ಚೆನ್ನಮ್ಮ : ಲೇಖಕರು:ಗ.ಸ.ಹಾಲಪ್ಪ)

ಇತರ ಭಾಷೆಗಳು

Static Wikipedia (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu

Static Wikipedia February 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu