ಕುಮಾರ ವಾಲ್ಮೀಕಿ
From Wikipedia
೧೫ನೆಯ ಶತಮಾನದಲ್ಲಿ ಜೀವಿಸಿದ ಕುಮಾರ ವಾಲ್ಮೀಕಿಯು ವಿಜಾಪುರ ಜಿಲ್ಲೆಯ ತೊರವೆ ಗ್ರಾಮದವನು. ಅಲ್ಲಿನ ದೇವರಾದ ನರಸಿಂಹನ ಅಂಕಿತದಲ್ಲಿ ಕಾವ್ಯರಚನೆ ಮಾಡಿದ್ದಾನೆ. ಈತ ಬರೆದ “ತೊರವೆ ರಾಮಾಯಣ”ವು ಜನಪ್ರಿಯವಾದ ನಡುಗನ್ನಡ ಕಾವ್ಯವಾಗಿದೆ. “ಕವಿರಾಜಹಂಸ” ಈತನ ಬಿರುದು.
ತೊರವೆ ರಾಮಾಯಣದ ಗದ್ಯಾನುವಾದವನ್ನು ಕೆ.ಎಸ್.ಕೃಷ್ಣಮೂರ್ತಿಯವರು ಮಾಡಿದ್ದಾರೆ.