New Immissions/Updates:
boundless - educate - edutalab - empatico - es-ebooks - es16 - fr16 - fsfiles - hesperian - solidaria - wikipediaforschools
- wikipediaforschoolses - wikipediaforschoolsfr - wikipediaforschoolspt - worldmap -

See also: Liber Liber - Libro Parlato - Liber Musica  - Manuzio -  Liber Liber ISO Files - Alphabetical Order - Multivolume ZIP Complete Archive - PDF Files - OGG Music Files -

PROJECT GUTENBERG HTML: Volume I - Volume II - Volume III - Volume IV - Volume V - Volume VI - Volume VII - Volume VIII - Volume IX

Ascolta ""Volevo solo fare un audiolibro"" su Spreaker.
CLASSICISTRANIERI HOME PAGE - YOUTUBE CHANNEL
Privacy Policy Cookie Policy Terms and Conditions
ಚದುರಂಗ - Wikipedia

ಚದುರಂಗ

From Wikipedia

ಈ ಲೇಖನ ಸಾಹಿತಿ 'ಚದುರಂಗ'ರವರ ಬಗ್ಗೆ.
ಚದುರಂಗ - ಆಟದ ಬಗ್ಗೆ ಮಾಹಿತಿಗೆ ಈ ಲೇಖನವನ್ನು ಓದಿ.

ಚದುರಂಗ - ಕನ್ನಡ ಚಲನಚಿತ್ರದ ಬಗ್ಗೆ ಮಾಹಿತಿಗೆ ಈ ಲೇಖನವನ್ನು ಓದಿ.
ಶ್ರೀ ಚದುರಂಗರು
ಶ್ರೀ ಚದುರಂಗರು

ಡಾ. ಚದುರಂಗ (ಜನವರಿ ೦೧ ೧೯೧೬ - ಅಕ್ಟೋಬರ್ ೧೯ ೧೯೯೮)

ಆಧುನಿಕ ಕನ್ನಡ ಸಾಹಿತ್ಯದಲ್ಲಿ ಕತೆ, ಕಾದಂಬರಿ ಪ್ರಕಾರಗಳಲ್ಲಿ ಸಾಧನೆ ಮಾಡಿದ ಹಲವರಲ್ಲಿ ಚದುರಂಗ ಪ್ರಮುಖರು. ಕತೆಗಾರರಾಗಿ, ಕಾದಂಬರಿಕಾರರಾಗಿ, ಚಲನಚಿತ್ರ ನಿರ್ದೇಶಕರಾಗಿ ಹೆಸರಾಗಿದ್ದ ಚದುರಂಗರ ನಿಜ ಹೆಸರು ಸುಬ್ರಹ್ಮಣ್ಯರಾಜು ಅರಸು.

೧೯೧೬ಜನವರಿ ೧ರಂದು ಹುಣಸೂರು ತಾಲೂಕು, ಕಲ್ಲಹಳ್ಳಿಯಲ್ಲಿ ಜನಿಸಿದ ಚದುರಂಗರು ಮೈಸೂರು ರಾಜಮನೆತನದ ಸಂಬಂಧಿ. ಇತರ ವಂಶದ ಪೂರ್ವಿಕರಲ್ಲಿ ಒಬ್ಬನಾದ ಮಂಗರಸ ಕವಿ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಉಲ್ಲೇಖಿತನಾಗಿದ್ದಾನೆ. ಮೈಸೂರಿನ ಮಹಾರಾಜ ಜಯ ಚಾಮರಾಜ ಒಡೆಯರ ಓರಗೆಯವರಾಗಿದ್ದ ಚದುರಂಗ ಮೈಸೂರಿನ ರಾಯಲ್ ಶಾಲೆಯಲ್ಲಿ ವಿದ್ಯಾಭ್ಯಾಸ ಆರಂಭಿಸಿದರು. ನಂತರ ಬೆಂಗಳೂರಿನ ಇಂಟರ್ ಮೀಡಿಯಟ್ ಕಾಲೇಜು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಮುಗಿಸಿದರು. ಪುಣೆಯಲ್ಲಿ ಕಾನೂನು ಮತ್ತು ಎಂ.ಎ. ಕಲಿಯಲು ಹೋಗಿ ಕಾರಣಾಂತರಗಳಿಂದ ಓದು ನಿಲ್ಲಿಸಿದರು.

ಬಾಲ್ಯದಲ್ಲೇ ಕತೆ ಕೇಳುವ ಹಾಗೂ ಆ ನಿಟ್ಟಿನಲ್ಲಿ ಯೋಚಿಸಿ ಬರೆಯುವ ಆಸಕ್ತಿ ಇದ್ದುದರಿಂದ ತಮ್ಮ ತಾಯಿ ಹೇಳುತ್ತಿದ್ದ ರಾಮಾಯಣ, ಮಹಾಭಾರತ, ಪುರಾಣ ಕತೆಗಳನ್ನು ರಾಜ ಮನೆತನದ ಹುಡುಗರಿಗೆ ಹೇಳುತ್ತಿದ್ದರು. ಗಾಂಧೀ ವಿಚಾರಧಾರೆಗೆ ಮನಸೋತು, ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗಿಯಾಗಿದ್ದರು. ಎಡಪಂಥಿಯ ವಿಚಾರಧಾರೆಗೆ ಮನಸೋತಿದ್ದ ಚದುರಂಗ ಎಂ. ಎನ್. ರಾಯ್ ಅವರ ವಿಚಾರಗಳನ್ನು ತಲೆ ತುಂಬಿಸಿಕೊಂಡಿದ್ದರು. ರಾಜ ಮನೆತನದ ಸಿರಿ ಸಂಪತ್ತು, ಅಲ್ಲಿನ ಆಡಂಬರ ಚದುರಂಗರಿಗೆ ಇಷ್ಟವಾಗಲಿಲ್ಲವಾದ್ದರಿಂದ ಶ್ರೀಮಂತ ಹೆಣ್ಣು ತಂದು ಮದುವೆ ಮಾಡಬೇಕೆಂಬ ಮನೆಯವರ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ತಮ್ಮಿಷ್ಟವಾದವರನ್ನು ಮದುವೆಯಾದರು. ಸಂಪ್ರದಾಯ ಹಾಗೂ ಸಾಮಾಜಿಕ ಕಟ್ಟು ಪಾಡುಗಳನ್ನು ಮುರಿದು ಸಂಗಾತಿ ಆಯ್ಕೆ ಮಾಡಿಕೊಂಡ ಚದುರಂಗ ಬದುಕನ್ನು ಹೋರಾಟವಾಗಿ ಸ್ವೀಕರಿಸಿ ನೋವುಂಡರು. ಮೈಸೂರು ತೊರೆದು ಹುಟ್ಟೂರು ಕಲ್ಲಹಳ್ಳಿಯಲ್ಲಿ ಬೇಸಾಯಕ್ಕೆ ತೊಡಗಿದರು. ಅಲ್ಲಿನ ಅನುಭವಗಳೇ ಮುಂದೆ ಕತೆ, ಕಾದಂಬರಿಗಳಲ್ಲಿ ಮೈತಾಳಿದವು. ಹಳ್ಳಿಯಲ್ಲೇ ಬರಹ ಆರಂಭಿಸಿ ಸಾಹಿತ್ಯದ ಒಡನಾಟವಿಟ್ಟುಕೊಂಡ ಚದುರಂಗರಿಗೆ ಕುವೆಂಪು, ಮಾಸ್ತಿ, ಗೊರೂರು ಪ್ರಭಾವ ಬೀರಿದರು. ಅನಕೃ, ತರಾಸು ಅವರ ಒಡನಾಟದಲ್ಲಿ ಪ್ರಗತಿಶೀಲ ಸಾಹಿತ್ಯ ಚಳುವಳಿಗೂ ಪಾಲ್ಗೊಂಡರು.

[ಬದಲಾಯಿಸಿ] ಕೃತಿಗಳು

`ಸ್ವಪ್ನ ಸುಂದರಿ' ಅವರ ಮೊದಲ ಕಥಾ ಸಂಕಲನ. ಶವದಮನೆ, ಇಣುಕುನೋಟ, ಬಂಗಾರದ ಗೆಜ್ಜೆ, ಬಣ್ಣದಬೊಂಬೆ,ಮೀನಿನ ಹೆಜ್ಜೆ ಮುಂದೆ ಪ್ರಕಟವಾದ ಕಥಾ ಸಂಕಲನಗಳು. `ನಾಲ್ಕುಮೊಳಭೂಮಿ' ಕನ್ನಡದ ಉತ್ತಮ ಕತೆಗಳಲ್ಲಿ ಒಂದು. ಕಥೆಯೊಳಗೊಂದು ಕಥಾ ತಂತ್ರದ ಬಳಕೆಯಿಂದ ಗ್ರಾಮ ಹಾಗೂ ನಗರ ಬದುಕಿನ ಅನ್ಯಾಯಗಳನ್ನು ಸಾಂಕೇತಿಸುವ ಈ ಕತೆ ಭೂವಿವಾದಕ್ಕೆ ಪರಿಹಾರ ಸೂಚಿಸುತ್ತದೆ. ನಾಟಕ, ಕವಿತೆಗಳಲ್ಲೂ ಚದುರಂಗ ಕೈಯಾಡಿಸಿದರು. ಇಲಿಬೋನು, ಕುಮಾರರಾಮ ಇವರನಾಟಕ ಕೃತಿಗಳು, `ಅಲೆಗಳು' ಕವನ ಸಂಕಲನ.

ಕತೆಗಾರರಾಗಿದ್ದಂತೆಯೇ, ಕಾದಂಬರಿಕಾರರಾಗಿ ಹೆಸರಾದ ಚದುರಂಗ `ಸರ್ವಮಂಗಳ', `ಉಯ್ಯಾಲೆ', `ವೈಶಾಖ' ಹಾಗೂ ಸಾಯುವ ಮುನ್ನ ಬರೆದ `ಹೆಜ್ಜಾಲ' ಎಂಬ ನಾಲ್ಕು ಕಾದಂಬರಿ ಕನ್ನಡ ಸಾಹಿತ್ಯ ಶ್ರೇಷ್ಠ ಕೃತಿಗಳು.

[ಬದಲಾಯಿಸಿ] ಚಿತ್ರರಂಗದೊಡನೆ ಚದುರಂಗರ ನಂಟು

ಪದವಿ ಅಧ್ಯಯನಕ್ಕೆಂದು ಪೂನಾಹೋದ ಚದುರಂಗರಿಗೆ ಚಿತ್ರರಂಗದ ಸಂಪರ್ಕವಾಯಿತು. ಆಗಿನ ಪ್ರಖ್ಯಾತ ಸಿನಿಮಾ ಪತ್ರಿಕೆ Motion pictures magazineಯಲ್ಲಿ Random shots ಎಂಬ ಅಂಕಣವನ್ನು ಬರೆಯಲು ಪ್ರಾರಂಭಿಸಿದರು. ಮಾಯಾ ಎಂಬ ಇಂಗ್ಲಿಷ್ ಚಿತ್ರಕ್ಕೆ ಸಹನಿರ್ದೇಶನ ಮಾಡಿದರು.

೧೯೪೮ ರಲ್ಲಿ ಸೋದರ ಸಂಬಂಧಿ ಕೆಂಪರಾಜ್ ಅರಸ್ ಅವರಿಗಾಗಿ ಭಕ್ತ ರಾಮದಾಸ ಎಂಬ ಚಿತ್ರವನ್ನು ನಿರ್ದೇಶಿದರು. ಈ ಚಿತ್ರಕ್ಕೆ ಚಿತ್ರಕಥೆ , ಸಂಭಾಷಣೆಗಳಲ್ಲದೆ ಎರಡು ಗೀತೆಗಳನ್ನು ರಚಿಸಿದರು. ೧೯೬೮ರಲ್ಲಿ ತಮ್ಮ ಕಾದಂಬರಿಯನ್ನು ಆಧರಿಸಿದ ಸರ್ವಮಂಗಳ ಚಿತ್ರವನ್ನು ನಿರ್ಮಿಸಿ ನಿರ್ದೇಶಿಸಿದರು. ಚದುರಂಗರ ಕಾದಂಬರಿ ಉಯ್ಯಾಲೆ ಅದೇ ಹೆಸರಿನಿಂದ ಚಲನಚಿತ್ರವಾಯಿತು. ಉಯ್ಯಾಲೆ ಚಲನಚಿತ್ರವನ್ನು ಚಲನಚಿತ್ರವನ್ನು ಲಕ್ಷ್ಮೀ ನಾರಾಯಣ್ ನಿರ್ದೇಶಿಸಿದರು. ಇದಕ್ಕೆ ಚದುರಂಗರು ಸಂಭಾಷಣೆ ಬರೆದಿದ್ದರು. ಅದರಲ್ಲಿ ರಾಜಕುಮಾರ್, ಕಲ್ಪನಾ ಪ್ರಮುಖ ಪಾತ್ರವಹಿಸಿದ್ದರು. ಇದು ರಾಜ್ಯ ಪ್ರಶಸ್ತಿ ಪಡೆಯಿತು. ಇದು ಹೊಸ ಅಲೆಯ ಚಿತ್ರಗಳ ಗುಂಪಿಗೆ ಸೇರಿ ಕಲಾತ್ಮಕ ಚಿತ್ರವೆನಿಸಿತು.

ಇದಲ್ಲದೆ, ಕುವೆಂಪು ಮತ್ತು ನೃತ್ಯ ಕಲಾವಿದೆ ವೆಂಕಟಲಕ್ಷ್ಮಮ್ಮ ಅವರ ಕುರಿತಾಗಿ ಸಾಕ್ಷಚಿತ್ರಗಳನ್ನು ನಿರ್ದೇಶಿಸಿದ್ದಾರೆ.

[ಬದಲಾಯಿಸಿ] ನಿಧನ

ಚದುರಂಗ ಅವರು ೧೯೯೮, ಅಕ್ಟೋಬರ್ ೧೯ರಂದು ಮೈಸೂರಿನಲ್ಲಿ ನಿಧನ ಹೊಂದಿದರು.

Static Wikipedia (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu

Static Wikipedia February 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu