ಜೈನ ಧರ್ಮ
From Wikipedia
ಜೈನ ಧರ್ಮ ಭಾರತದಲ್ಲಿ ಉಗಮಿಸಿದ ಒಂದು ಧರ್ಮ. ಈ ಧರ್ಮದ ತತ್ವಶಾಸ್ತ್ರದ ಪ್ರಕಾರ ಇದು ವಿಶ್ವದ ಅನಂತ ಸತ್ಯಗಳ ಮೇಲೆ ಆಧಾರಿತ ಧರ್ಮ. ಪಾರಂಪರಿಕ ನಂಬಿಕೆಯ ಅನುಸಾರ, ಋಷಭದೇವ ಈ ಸತ್ಯಗಳನ್ನು ಮೊದಲು ಅರಿದವ. ಈ ಅರಿವನ್ನು ಪಡೆದವರು ತೀರ್ಥಂಕರರೆಂದು ಕರೆಯಲ್ಪಡುತ್ತಾರೆ. ಋಷಭದೇವನ ನಂತರ ಬಂದ ೨೩ ತೀರ್ಥಂಕರರಲ್ಲಿ ಕೊನೆಯವ ವರ್ಧಮಾನ ಮಹಾವೀರ.