ಡಾ.ವಿಷ್ಣುವರ್ಧನ್
From Wikipedia
ಡಾ. ವಿಷ್ಣುವರ್ಧನ್ (ಜನನ: ಸೆಪ್ಟೆಂಬರ್ ೧೮ ೧೯೫೨) ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು.
ಕುಮಾರ್ ಎಂಬುದು ಇವರ ಮೂಲ ಹೆಸರು.
ಸಾಹಸಸಿಂಹ ಎಂಬ ಬಿರುದು ಇರುವ ಡಾ. ವಿಷ್ಣುವರ್ಧನ್ ಇದುವರೆಗೆ ಒಟ್ಟು ಸುಮಾರು ೧೭೫ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರ ಮೊದಲ ಚಿತ್ರ ಎಸ್ ಎಲ್ ಭೈರಪ್ಪನವರ ಕಾದಂಬರಿಯಾಧಾರಿತ ವಂಶವೃಕ್ಷ. ಇದರಲ್ಲಿ ಸಣ್ಣ ಪಾತ್ರ ವಹಿಸಿದ್ದರು.
ನಾಯಕನ ಪಾತ್ರದಲ್ಲಿ ಇವರ ಮೊದಲ ಚಿತ್ರ ೧೯೭೨ ರಲ್ಲಿ ಬಿಡುಗಡೆಯಾದ ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು.
ಬೆಂಗಳೂರು ವಿಶ್ವವಿದ್ಯಾಲಯವು ೨೦೦೫ನೇ ವರ್ಷದಲ್ಲಿ ಇವರಿಗೆ ಗೌರವ ಡಾಕ್ಟರೇಟ್ ಪದವಿಯನ್ನಿತ್ತು ಗೌರವಿಸಿದೆ.
ನಟನೆಯಲ್ಲದೇ, ನಾಗ ಕಾಳ ಭೈರವ, ಜಿಮ್ಮಿಗಲ್ಲು, ಖೈದಿ ಮೋಜುಗಾರ ಸೊಗಸುಗಾರ, ವಿಷ್ಣುಸೇನಾ ಇವೇ ಮೊದಲಾದ ಕೆಲವು ಚಿತ್ರಗಳಲ್ಲಿ ಹಿನ್ನೆಲೆಗಾಯನವನ್ನೂ ಕೂಡ ಮಾಡಿದ್ದಾರೆ.
[ಬದಲಾಯಿಸಿ] ಪ್ರಸಿದ್ಧ ಚಿತ್ರಗಳು
ಡಾ. ವಿಷ್ಣುವರ್ಧನ್ ಅಭಿನಯದ ಕೆಲವು ಪ್ರಸಿದ್ಧ ಚಿತ್ರಗಳು:
- ನಾಗರಹಾವು (೧೯೭೨)
- ಗಂಧದಗುಡಿ (೧೯೭೩)
- ಭೂತಯ್ಯನ ಮಗ ಅಯ್ಯು (೧೯೭೪)
- ಹೊಂಬಿಸಿಲು (೧೯೭೭)
- ಸಾಹಸ ಸಿಂಹ (೧೯೮೨)
- ಬಂಧನ (೧೯೮೪)
- ಜೀವನ ಚಕ್ರ (೧೯೮೫)
- ಸತ್ಯಜ್ಯೋತಿ (೧೯೮೬)
- ಮಲಯ ಮಾರುತ (೧೯೮೬)
- ಸುಪ್ರಭಾತ (೧೯೮೮)
- ಹೃದಯಗೀತೆ (೧೯೮೯)
- ಮುತ್ತಿನ ಹಾರ (೧೯೯೦)
- ಮತ್ತೆ ಹಾಡಿತು ಕೋಗಿಲೆ (೧೯೯೦)
- ನಿಷ್ಕರ್ಷ (೧೯೯೩)
- ಯಜಮಾನ (೨೦೦೦)
- ಆಪ್ತಮಿತ್ರ (೨೦೦೪)
- ವಿಷ್ಣುಸೇನಾ (೨೦೦೫)
[ಬದಲಾಯಿಸಿ] ಕನ್ನಡ ಚಲನಚಿತ್ರ ನಾಯಕರು
ಸುಬ್ಬಯ್ಯ ನಾಯ್ಡು | ಉದಯಕುಮಾರ್ | ಕಲ್ಯಾಣಕುಮಾರ್ | ಡಾ. ರಾಜ್‌ಕುಮಾರ್ | ಗಂಗಾಧರ್ | ಡಾ. ವಿಷ್ಣುವರ್ಧನ್ | ರಾಜೇಶ್ | ಅಶೋಕ್ | ಅಂಬರೀಶ್ | ಶ್ರೀನಾಥ್ | ಪ್ರಭಾಕರ್ | ಅನಂತ ನಾಗ್ | ಶಂಕರ್ ನಾಗ್ | ಲೋಕೇಶ್ | ಮಾನು | ಕಾಶೀನಾಥ್ | ಮುರಳಿ(ಪ್ರೇಮಪರ್ವ) | ಚರಣ್ ರಾಜ್ | ವಿನೋದ್ ರಾಜ್ | ಶ್ರೀಧರ್ | ರಾಮಕೃಷ್ಣ | ಅರ್ಜುನ್ ಸರ್ಜಾ |ದೇವರಾಜ್ | ಸಾಯಿಕುಮಾರ್ | ರಾಮ್‍ಕುಮಾರ್ | ಥ್ರಿಲ್ಲರ್ ಮಂಜು | ಎಸ್.ನಾರಾಯಣ್ | ಜಗ್ಗೇಶ್ | ಉಪೇಂದ್ರ | ರವಿಚಂದ್ರನ್ | ಸುನಿಲ್ |ರಮೇಶ್ | ಸುದೀಪ್ | ಶಿವರಾಜ್‍ಕುಮಾರ್ | ಪುನೀತ್ ರಾಜ್‍ಕುಮಾರ್ | ರಾಘವೇಂದ್ರ ರಾಜ್ ಕುಮಾರ್ | ಮುರಳಿ | ವಿಜಯ ರಾಘವೇಂದ್ರ | ದರ್ಶನ್ ತೂಗುದೀಪ್ | ಸುನಿಲ್ ರಾವ್ | ಧ್ಯಾನ್| ಪ್ರೇಂ |ರಜನೀಕಾಂತ್