ಲಕ್ಷ್ಮೀಶ
From Wikipedia
ಲಕ್ಷ್ಮೀಶನು ೧೬ನೆಯ ಶತಮಾನದಲ್ಲಿದ್ದ ಕವಿ. ಈತನ ಊರು ಚಿಕ್ಕಮಗಳೂರು ಜಿಲ್ಲೆಯ ದೇವನೂರು. ಅಲ್ಲಿಯ ಲಕ್ಷ್ಮೀಕಾಂತ ದೇವಾಲಯದಲ್ಲಿ ಲಕ್ಷ್ಮೀಶನ ವಿಗ್ರಹವನ್ನು ಸ್ಥಾಪಿಸಲಾಗಿದೆ. ಜೈಮಿನಿ ಭಾರತ ಲಕ್ಷ್ಮೀಶನ ಪ್ರಸಿದ್ಧ ಕಾವ್ಯ. ಇದು ಸಂಸ್ಕೃತ ಜೈಮಿನಿ ಭಾರತದ ಕನ್ನಡ ರೂಪವಾಗಿದ್ದು ವಾರ್ಧಕ ಷಟ್ಪದಿಯಲ್ಲಿದೆ.